ಮಂಗಳೂರು: ಕ್ಯಾಂಪಸ್ ಫ್ರಂಟ್‌ನಿಂದ ಗಣರಾಜ್ಯೋತ್ಸವ
Update: 2019-01-26 23:09 IST
ಮಂಗಳೂರು, ಜ.26: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ.ಕ. ಜಿಲ್ಲಾ ಸಮಿತಿಯಿಂದ 70ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲಾ ಕಚೇರಿ ಮುಂಭಾಗ ಆಚರಿಸಲಾಯಿತು.
ರಾಜ್ಯ ಸಮಿತಿ ಸದಸ್ಯರಾದ ಮುಹಮ್ಮದ್ ಇರ್ಷಾದ್ ಧ್ವಜಾರೋಹಣಗೈದು, ಸಂದೇಶ ನೀಡಿದರು. ರಾಜ್ಯ ಸಮಿತಿ ಸದಸ್ಯ ಅಶ್ವಾನ್ ಸಾದಿಕ್, ಜಿಲ್ಲಾಧ್ಯಕ್ಷ ಮುಹಮ್ಮದ್ ಸಾದಿಕ್, ಕಾರ್ಯದರ್ಶಿ ನಿಝಾಂ, ತಾಲೂಕು ಅಧ್ಯಕ್ಷ ಸಿರಾಜ್ ಮತ್ತಿತರರು ಉಪಸ್ಥಿತರಿದ್ದರು.