ಸಿವಿಸಿ ವಿರುದ್ಧದ ಭ್ರಷ್ಟಾಚಾರ ಪ್ರಕರಣ: ನಿರ್ವಹಣೆಗೆ ಮಾರ್ಗದರ್ಶಿ ಸೂತ್ರದ ಕೊರತೆ: ಸರಕಾರ

Update: 2019-01-27 16:20 GMT

ಹೊಸದಿಲ್ಲಿ, ಜ.27: ಸೂಕ್ತ ಮಾರ್ಗದರ್ಶಿ ಸೂತ್ರ ಇಲ್ಲದ ಕಾರಣ ಮುಖ್ಯ ಜಾಗೃತ ಆಯುಕ್ತ(ಸಿವಿಸಿ) ಕೆವಿ ಚೌಧರಿ ವಿರುದ್ಧ ವರ್ಷದ ಹಿಂದೆ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗದು ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.

ಸಿವಿಸಿ/ಜಾಗೃತ ಆಯುಕ್ತರ ವಿರುದ್ಧ ಸಲ್ಲಿಕೆಯಾಗುವ ದೂರುಗಳ ನಿರ್ವಹಣೆಗೆ ಸೂಕ್ತ ಮಾರ್ಗದರ್ಶಿ ಸೂತ್ರವನ್ನು ರೂಪಿಸಲು ಸರಕಾರ ಸೂಚಿಸಿದ್ದು ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಈ ಕುರಿತ ಪ್ರಕ್ರಿಯೆ ಆರಂಭಿಸಿದೆ ಎಂದು ಸಚಿವಾಲಯ ತಿಳಿಸಿದೆ. ಐಎಫ್‌ಎಸ್ ಅಧಿಕಾರಿ ಸಂಜೀವ್ ಚತುರ್ವೇದಿ ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ)ಯಡಿ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಜಾಗೃತ ಆಯೋಗದ ತನಿಖಾ ವರದಿಯನ್ನು ಪರಿಗಣಿಸಿ ಪ್ರಧಾನಿ ಮೋದಿ ನೇತೃತ್ವದ ಸಮಿತಿ ಜನವರಿ 10ರಂದು ಸಿಬಿಐ ನಿರ್ದೇಶಕ ಅಲೋಕ್ ವರ್ಮರನ್ನು ಹುದ್ದೆಯಿಂದ ವಜಾಗೊಳಿಸಿರುವುದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News