×
Ad

ಹನೂರು: ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಇಬ್ಬರಿಗೆ ಗಾಯ

Update: 2019-01-28 21:19 IST

ಹನೂರು,ಜ.28: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್‍ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಹನೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನೆಡೆದಿದೆ

ಹನೂರು ಪಟ್ಟಣದ ನಿವಾಸಿಗಳಾದ ಶಶಿ (28) ಮತ್ತು ಬಾಲಾಜಿ(26) ಗಾಯಾಳುಗಳು.

ಶಶಿ ಮತ್ತು ಬಾಲಾಜಿ ಕೊಳ್ಳೇಗಾಲದಿಂದ ಬೈಕ್‍ನಲ್ಲಿ ಹನೂರಿನ ಕಡೆ ಬರುತ್ತಿದ್ದಾಗ ಮಂಗಲ ಗ್ರಾಮ ಮತ್ತು ಹುಲುಸುಗುಡ್ಡೆ ಮಾರ್ಗ ಮದ್ಯೆ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ ಬೈಕ್‍ನಲ್ಲಿದ್ದ ಈ ಇಬ್ಬರಿಗೂ ಸಹ ತೀವ್ರ ಪೆಟ್ಟಾಗಿದ್ದು, ತಕ್ಷಣ ಸಾರ್ವಜನಿಕರ ಸಹಾಯದಿಂದ ಸಮೀಪದ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಸೇರಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.

ಹನೂರು ಪೊಲೀಸರು ಸ್ಥಳ ಪರಿಶೀಲಿಸಿ, ಮಾಹಿತಿ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News