ರಸ್ತೆ ಅಪಘಾತ: ಬೈಕ್ ಸಹಸವಾರ ಮೃತ್ಯು
ಕುಂದಾಪುರ, ಜ.28: ತಲ್ಲೂರು ಸೇತುವೆಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.27ರಂದು ರಾತ್ರಿ ವೇಳೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ರಾಜಸ್ಥಾನ ಮೂಲದ ರಾಜೇಂದ್ರ ಸಿಂಗ್(55) ಎಂದು ಗುರು ತಿಸಲಾಗಿದೆ. ಕುಂದಾಪುರ ಕಡೆಯಿಂದ ತ್ರಾಸಿ ಕಡೆಗೆ ಬೈಕಿನಲ್ಲಿ ಹೋಗುತ್ತಿದ್ದ ಸ್ಟಾರ್ವಿನ್ ಮನೋಹರ್ ಎಂಬಾತ ಅಟೋರಿಕ್ಷಾವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ತ್ರಾಸಿ ಕಡೆ ಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಕೇಶವ ಸಿಂಗ್ ಎಂಬವರ ಬೈಕ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರ ಪರಿಣಾಮ ರಸ್ತೆ ಬಿದ್ದ ಹಿಂಬದಿ ಸವಾರ ರಾಜೇಂದ್ರ ಸಿಂಗ್ ಎಂಬ ವರ ಕಾಲುಗಳ ಮೇಲೆ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಕ್ರೇನ್ ಹಾದುಹೊಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಾಜೇಂದ್ರ ಸಿಂಗ್ ರಾತ್ರಿ 11:10ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.