ಜ.30ರಿಂದ ಸ್ಪರ್ಶ ಕುಷ್ಠ ಅರಿವು ಆಂದೋಲನ
Update: 2019-01-28 22:19 IST
ಉಡುಪಿ, ಜ.28: ಜಿಲ್ಲೆಯಲ್ಲಿ ಜ.30ರಿಂದ ಫೆ.13ರವರೆಗೆ ಸ್ಪರ್ಷ ಕುಷ್ಠ ಅರಿವು ಆಂದೋಲನ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ.
ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ಪರ್ಶ ಕುಷ್ಠ ಆಂದೋಲನ ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ನಡೆಯಲಿದೆ. ಜ.30ರಂದು ವಿಶೇಷ ಗ್ರಾಮಸಭೆ ಕರೆದು ಕುಷ್ಠರೋಗದ ಕುರಿತ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುವಂತೆ ಮತ್ತು ಎಲ್ಲ ಅಂಗನವಾಡಿ ಹಾಗೂ ಶಾಲೆಗಳಲ್ಲಿ ನಡೆಯುವ ಸಭೆಯಲ್ಲಿ ಸಹ ಈ ಬಗ್ಗೆ ಆರೋಗ್ಯ ಇಲಾಖೆಯ ವೈದ್ಯರು ಮಾಹಿತಿ ನೀಡುವಂತೆ ಸಿಇಓ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಸುರೇಂದ್ರ ಚಿಂಬಾಳ್ಕರ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.