ಉಡುಪಿ: ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ
Update: 2019-01-28 22:21 IST
ಉಡುಪಿ, ಜ.28: ಇಂದಿನಿಂದ ಫೆ.16ರವರೆಗೆ ಜಿಲ್ಲೆಯಲ್ಲಿ ಕೈಗೊಳ್ಳಲಾಗುವ 15ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಅಪರಜಿಲ್ಲಾಧಿಕಾರಿ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ನಿರ್ವಹಣಾ ಸಮಿತಿ ಸಭೆ ನಡೆಯಿತು.
ಸಮಿತಿಯ ಸದಸ್ಯರಾದ ಜಿಲ್ಲಾ ಆರೋಗ್ಯಾಧಿಕಾರಿ, ಆರೋಗ್ಯ ಇಲಾಖೆ ಪ್ರತಿನಿಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರತಿನಿಧಿ, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ನಗರ ಸಭೆಯ ಆಯುಕ್ತರು, ಪ್ರಾದೇಶಿಕ ರೋಗ ನಿರ್ಣಯ ಪ್ರಯೋಗಾಲಯ ವಿಜ್ಞಾನಿ, ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರು, ಪಶು ಪಾಲನಾ ಇಲಾಖೆಯ ಉಪ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಪಶುಆಸ್ಪತ್ರೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.