×
Ad

ಜ.31ರಂದು ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರಧಾನ

Update: 2019-01-28 22:24 IST

ಉಡುಪಿ, ಜ.28: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ವಿಜ್ಞಾನ ಪರಿಷತ್‌ಗಳ ಸಹಯೋಗದಲ್ಲಿ 2018-19ನೇ ಸಾಲಿನ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜ.31ರಂದು ಬೆಳಗ್ಗೆ 10 ಕ್ಕೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಿದೆ.

ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ. ಜೋಷಿ ಉದ್ಘಾಟಿಸಲಿದ್ದು, ಉಡುಪಿ ಜಿಪಂ ಅಧ್ಯಕ್ಷ ದಿನಕರ್‌ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ.

ಅತಿಥಿಗಳಾಗಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪೋಲಿಸ್ ಅಧೀಕ್ಷಕ ಲಕ್ಷ್ಮಣ ಬ.ನಿಂಬರಗಿ, ಜಿಪಂ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ಸಿಂಧು ಬಿ. ರೂಪೇಶ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ವಲಯದ ಹಿರಿಯ ಪರಿಸರ ಅಧಿಕಾರಿ ರಾಜ್‌ಶೇಖರ್ ಬಿ. ಪುರಾಣಿಕ್, ರಾಜ್ಯ ವಿಜ್ಞಾನ ಪರಿಷತ್ ಉಪಾಧ್ಯಕ್ಷ ವೈ. ಭುವನೇಂದ್ರ ರಾವ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಭಾಗ್ಯಲಕ್ಷ್ಮಿ ಭಾಗವಹಿಸಲಿದ್ದಾರೆ.

ನಿವೃತ್ತ ಸಸ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ.ವಿ.ಅರವಿಂದ ಹೆಬ್ಬಾರ್ ನಾವು ಸೇವಿಸುವ ಆಹಾರ ಎಷ್ಟು ಸುರಕ್ಷಿತ...? ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಡಾ. ಹೆಚ್ ಲಕ್ಷ್ಮೀಕಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News