ಬಂಟ್ವಾಳ: ಜ. 30ರಂದು ಸಿಪಿಐ ಕಚೇರಿ ಮರು ಉದ್ಫಾಟನೆ
ಬಂಟ್ವಾಳ, ಜ. 28: ದುಷ್ಕರ್ಮಿಗಳಿಂದ ಹಾನಿಗೀಡಾದ ಬಂಟ್ವಾಳದ ಸಿಪಿಐ ಪಕ್ಷದ ಕಚೇರಿ ಎ.ಶಾಂತಾರಾಂ ಪೈ ಸ್ಮಾರಕ ಭವನದ ಮರು ಉದ್ಫಾಟನೆ ಹಾಗೂ ಬಂಟ್ವಾಳ ಚಲೋ ಕಾರ್ಯಕ್ರಮದಡಿ ಪ್ರತಿಭಟನೆ ಜ. 30ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಭವನದ ಉದ್ಘಾಟನೆಯನ್ನು ದಿ. ಶಾಂತಾರಾಂ ಪೈ ಅವರ ಪುತ್ರ ಕಿಶೋರ್ ಪೈ ನೆರವೇರಿಸಲಿದ್ದು, ಬಂಟ್ವಾಳ ಚಲೋ ಕಾರ್ಯಕ್ರಮದ ನಿಟ್ಟಿನಲ್ಲಿ ಆಯೋಜಿಸಿದ ಬೃಹತ್ ಪ್ರತಿಭಟನೆಯಲ್ಲಿ ಮುಖ್ಯ ಭಾಷಣಗಾರರಾಗಿ ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ರಾಜ್ಯ ಸಭಾ ಸದಸ್ಯ ಬಿನೋಯ್ ವಿಶ್ವಂ ಮಾತನಾಡಲಿದ್ದಾರೆ. ಅಧ್ಯಕ್ಷತೆಯನ್ನು ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಿಪಿಐ ರಾಜ್ಯ ಮಂಡಳಿ ಕಾರ್ಯದರ್ಶಿ ಸಾತಿ ಸುಂದರೇಶ್, ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ, ಡಾ. ಸಿದ್ದನಗೌಡ ಪಾಟೀಲ, ಪಿ.ವಿ.ಲೋಕೇಶ್, ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಜೆಡಿಎಸ್ ಬಂಟ್ವಾಳ ತಾಲೂಕು ಅಧ್ಯಕ್ಷ ಬಿ.ಮೋಹನ, ಸಿಪಿಐಎಂನ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ, ಎಐಟಿಯುಸಿ ರಾಜ್ಯ ಅಧ್ಯಕ್ಷ ಅನಂತ ಸುಬ್ಬರಾವ್, ಕಾರ್ಯದರ್ಶಿ ವಿಜಯ ಭಾಸ್ಕರ್, ಭಾರತೀಯ ಮಹಿಳಾ ಒಕ್ಕೂಟದ ರಾಜ್ಯ ಅಧ್ಯಕ್ಷೆ ಜ್ಯೋತಿ ಎ., ಮುಂತಾದವರು ಭಾಗವಹಿಸುವರು ಎಂದು ಸಿಪಿಐ ತಾಲೂಕು ಕಾರ್ಯದರ್ಶಿ ಬಿ.ಶೇಖರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ