ಚುನಾವಣಾ ಪ್ರಕ್ರಿಯೆ ಸ್ಥಳ ವರ್ಗಾವಣೆಗೆ ಮಾಜಿ ಸಚಿವ ಎಚ್.ಎಂ.ರೇವಣ್ಣ ಮನವಿ

Update: 2019-01-28 17:48 GMT

ಬೆಂಗಳೂರು, ಜ.28: ಅಗ್ರಹಾರ ದಾಸರಹಳ್ಳಿ ಹಾಗೂ ಬಸವೇಶ್ವರ ನಗರದ ಮಧ್ಯಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಆಟದ ಮೈದಾನದಲ್ಲಿ ಚುನಾವಣೆ ಸಂದರ್ಭದಲ್ಲಿ ಇವಿಎಂ ಹಾಗೂ ಮತ್ತಿತರೆ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳುವುದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿದೆ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಮುಖ್ಯಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಅಂಬೇಡ್ಕರ್ ಮೈದಾನದಲ್ಲಿ ಯುವಕರು, ಮಕ್ಕಳು, ಮಹಿಳೆಯರು ಹಾಗೂ ಕ್ರೀಡಾಭಿಮಾನಿಗಳು ದಿನನಿತ್ಯ ಈ ಮೈದಾನವನ್ನು ಬಳಸಿಕೊಳ್ಳುತ್ತಾರೆ. ಅಲ್ಲದೆ, ಕ್ರೀಡಾಂಗಣದ ಒಳಗಿನ ಬಿಬಿಎಂಪಿ ಕಟ್ಟಡದಲ್ಲಿರುವ ಗ್ರಂಥಾಲಯದಲ್ಲಿ ಅನೇಕರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಾಸ ಮಾಡುತ್ತಾರೆ.

ಆದರೆ, ಸ್ಥಳೀಯ ಸಂಸ್ಥೆ ಚುನಾವಣೆಗಳು ಸೇರಿದಂತೆ ವಿಧಾನಸಭೆ, ಲೋಕಸಭೆ ಚುನಾವಣೆಗಳ ಸಂದರ್ಭದಲ್ಲಿ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಗಾಗಿ ಈ ಮೈದಾನ ಬಳಕೆ ಮಾಡಿಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಮೈದಾನಕ್ಕೆ ಬರುವವರಿಗೆ ನಿರ್ಬಂಧ ಹೇರಲಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಹೀಗಾಗಿ, ಇಲ್ಲಿಯೇ ಇರುವ ಸುಭಾಷ್‌ ಚಂದ್ರಬೋಸ್ ಕ್ರೀಡಾಂಗಣಕ್ಕೆ ಪ್ರಕ್ರಿಯೆಯನ್ನು ವರ್ಗಾವಣೆ ಮಾಡಿಕೊಳ್ಳಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News