ಕಡಂಬು ಗುಂಪು ಘರ್ಷಣೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ
Update: 2019-01-28 23:51 IST
ಬಂಟ್ವಾಳ, ಜ. 28: ಕಂಡಬುವಿನಲ್ಲಿ ನಡೆದ ಗುಂಪು ಘರ್ಷಣೆ, ಅಕ್ರಮ ಜಾನುವಾರು ಸಾಗಾಟ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಂಡಂಬು ನಿವಾಸಿ ಚೇತನ್ (24), ಕೊಡುಂಗಾಯಿ ನಿವಾಸಿ ವಿನೋದ್ (23) ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಗೆ ಫೆ. 12ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಬಂಟ್ವಾಳ ಎಎಸ್ಪಿ ಸೈದುಲು ಅಡಾವತ್, ಬಂಟ್ವಾಳ ವೃತ್ತ ನಿರೀಕ್ಷಕ ನಾಗರಾಜ್ ಮಾರ್ಗದರ್ಶನದಲ್ಲಿ ವಿಟ್ಲ ಎಸ್ಸೈ ಯಲ್ಲಪ್ಪ ಅವರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಡಂಬು ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಬಂಧಿತರ ಸಂಖ್ಯೆ 12ಕ್ಕೇರಿದೆ.