ಎತ್ತಿನ ಗಾಡಿಗೆ ಬೈಕ್ ಢಿಕ್ಕಿ: ಸವಾರ ಸಾವು

Update: 2019-01-29 16:55 GMT

ಶಿವಮೊಗ್ಗ, ಜ. 29: ಎತ್ತಿನಗಾಡಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಲ್ಲೇಸರ ಗ್ರಾಮದ ಶಕಂರಹಳ್ಳಿ ನೊಣಬೂರು ರಸ್ತೆಯಲ್ಲಿ ವರದಿಯಾಗಿದೆ. 

ಹರಳೀಮಠದ ಬೊಂಬಳಿಗೆ ಗ್ರಾಮದ ನಿವಾಸಿ ಕೃಷ್ಣಮೂರ್ತಿ (33) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ದಿನಸಿ ಸಾಮಾಗ್ರಿಗಳನ್ನು ಖರೀದಿಸಿ ಬೈಕ್‍ನಲ್ಲಿ ಮನೆಗೆ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದ್ದಾರೆ.

ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News