ಫೆ. 2-7: ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠೆ

Update: 2019-01-29 17:28 GMT

ಪುತ್ತೂರು, ಜ. 28: ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವ„ ಉತ್ಸವ ಫೆ. 2ರಿಂದ 7ರ ತನಕ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಹೇಳಿದರು.

ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ ಕಾರ್ಯಕ್ರಮ 1944ರಲ್ಲಿ ನಡೆದಿತ್ತು. ಇದೀಗ ಜಿರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು, ಜೀರ್ಣೋದ್ಧಾರ ಕೆಲಸಕ್ಕೆ ಸುಮಾರು 1 ಕೋಟಿ ರೂ. ವೆಚ್ಚ ತಗಲಿದೆ. ಇದನ್ನು ಸವಣೂರುಗುತ್ತು ಕುಟುಂಬಸ್ಥರು ಭರಿಸಿದ್ದಾರೆ. ಇದೀಗ ಬ್ರಹ್ಮಕಲಶೋತ್ಸವಕ್ಕೆ ಸುಮಾರು 15 ಲಕ್ಷ ರೂ. ವೆಚ್ಚವಾಗಲಿದ್ದು, ಇದಕ್ಕಾಗಿ ಊರ ಹಾಗೂ ಪರ ಊರ ಭಕ್ತಾಭಿಮಾನಿಗಳಿಂದ ದೇಣಿಗೆ ಸಂಗ್ರಹಿಸಲಾಗುತ್ತಿದೆ ಎಂದರು.

ಫೆ. 2ರಂದು ದೇವಾಲಯಕ್ಕೆ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಆಗಮನೊಂದಿಗೆ ಬ್ರಹ್ಮಕಲಶೋತ್ಸವ ವೈದಿಕ ಕಾರ್ಯಕ್ರಮ ಆರಂಭವಾಗಲಿದೆ. ಸಂಜೆ 3ರಿಂದ 5ರವರೆಗೆ ಭಜನೆ, ರಾತ್ರಿ 7ರಿಂದ ಶ್ರೀಕೃಷ್ಣ ಸಂಧಾನ ಪೌರಾಣಿಕ ನಾಟಕ ನಡೆಯಲಿದೆ.

ಫೆ. 3ರಂದು ಬೆಳಿಗ್ಗೆ 6ಕ್ಕೆ ವೈದಿಕ ಕಾರ್ಯಕ್ರಮ, ಮಧ್ಯಾಹ್ನ ಅನ್ನಸಂತರ್ಪಣೆ, ಮಧ್ಯಾಹ್ನ 1ಕ್ಕೆ ಸವಣೂರು ಶ್ರವಣರಂಗ ಪ್ರತಿಷ್ಠಾನದಿಂದ ವಾಮನ ಚರಿತ್ರೆ ಯಕ್ಷಗಾನ ತಾಳಮದ್ದಳೆ, ರಾತ್ರಿ ವೈದಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 5.30ರಿಂದ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರ ಆಶೀರ್ವಚನದೊಂದಿಗೆ ಧಾರ್ಮಿಕ ಸಭೆ ನಡೆಯಲಿದೆ. ಶಿಲ್ಪಶಾಸ್ತಜ್ಞ ಎಸ್.ಎಂ. ಪ್ರಸಾದ್ ಮುನಿಯಂಗಳ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ.ಪಂ. ಸದಸ್ಯೆ ಪ್ರಮೀಳ ಜನಾರ್ದನ, ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ., ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಕೆ. ಮಾಧವ ಗೌಡ, ವಲಯ ಅರಣ್ಯಾ„ಕಾರಿ ಪ್ರವೀಣ್ ಶೆಟ್ಟಿ, ನ್ಯಾಯವಾದಿ ಮೋಹನ್ ಗೌಡ ಇಡ್ಯಡ್ಕ ಭಾಗವಹಿಸಲಿದ್ದಾರೆ. ನಂತರ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

ಫೆ. 4ರಂದು, ಬೆಳಿಗ್ಗೆ ವೈದಿಕ ಕಾರ್ಯಕ್ರಮ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆಯಲಿದೆ. ಸಂಜೆ 3ರಿಂದ ಭಜನೆ, ಸಾಂಸ್ಕøತಿಕ ಕಾರ್ಯಕ್ರಮ,ಯಕ್ಷಗಾನ ಬಯಲಾಟ ನಡೆಯಲಿದೆ. ಫೆ. 5ರಂದು ಬೆಳಿಗ್ಗೆ ವೈದಿಕ ಕಾರ್ಯಕ್ರಮ, ಮಧ್ಯಾಹ್ನ ಅನ್ನಸಂತರ್ಪಣೆ, ಮಧ್ಯಾಹ್ನ 3ರಿಂದ ಭಜನೆ ನಡೆಯಲಿದೆ. ಸಂಜೆ 5.30ಕ್ಕೆ ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಶಾಸಕ ಎಸ್. ಅಂಗಾರ ವಹಿಸಲಿದ್ದು, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಸಚಿವ ಬಿ. ರಮಾನಾಥ ರೈ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾಪಂ ಉಪಾಧ್ಯಕ್ಷೆ ರಾಜೇಶ್ವರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ತಾಲೂಕು ಯೋಜನಾಧಿಕಾರಿ ಜನಾರ್ದನ ಎಸ್. ಭಾಗವಹಿಸಲಿದ್ದಾರೆ. ರಾತ್ರಿ 8.30ರಿಂದ ದಾದಂದ್ ಪನೋಡ್ ತುಳು ನಾಟಕ ನಡೆಯಲಿದೆ.

ಫೆ. 6ರಂದು ಬೆಳಿಗ್ಗೆ ಮತ್ತು ರಾತ್ರಿ ವೈದಿಕ ಕಾರ್ಯಕ್ರಮ, ಸಂಜೆ 5ರಿಂದ ಶಾಸ್ತ್ರೀಯ ಸಂಗೀತ, ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಫೆ. 7ರಂದು ಬೆಳಿಗ್ಗೆ 8.17ಕ್ಕೆ ವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೇವರುಗಳ ಪುನರ್ ಪ್ರತಿಷ್ಠೆ ನಡೆಯಲಿದೆ. ಬೆಳಿಗ್ಗೆ 11.30ಕ್ಕೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ರಂಗಪೂಜೆ, ಭೂತಬಲಿ, ದರ್ಶನಬಲಿ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸವಣೂರು ಗುತ್ತಿನ ಡಾ. ರತ್ನಾಕರ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವೆಂಕಪ್ಪ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ನೆಲ್ತಿಲ ರವೀಂದ್ರನಾಥ ರೈ ನೋಲ್ಮೆ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಸುಂದರ ರೈ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News