ಕಾಪುವಿನಲ್ಲಿ ತುಳು ಸಾಹಿತ್ಯ, ಸಂಸ್ಕೃತಿ ಬೊಕ್ಕ ಪುಲಮರ್ದ್‍ದ ಪೊಲಬು

Update: 2019-01-29 17:48 GMT

ಕಾಪು, ಜ. 29 : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ತುಳು ಭಾಷೆಯಲ್ಲಿ ಎಂ.ಎ. ಕೋರ್ಸ್ ಆರಂಭವಾಗಿದ್ದು, ಮುಂದಿನ ವರ್ಷದಿಂದ ಪದವಿ ವಿಭಾಗದಲ್ಲೂ ಕೂಡಾ ತುಳು ಭಾಷೆಯನ್ನು ಐಚ್ಛಿಕ ಭಾಷೆಯನ್ನಾಗಿ ಅಳವಡಿಸಿಕೊಳ್ಳಲು ಒತ್ತಡ ಹೇರಲಾಗುತ್ತಿದೆ. ಇದರಿಂದಾಗಿ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಒತ್ತಾಯಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಎ. ಸಿ. ಭಂಡಾರಿ ಅಭಿಪ್ರಾಯಪಟ್ಟರು. 

ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಕಾಪು ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ದಂಡತೀರ್ಥ ವಿದ್ಯಾಸಂಸ್ಥೆಯ ಸಂಸ್ಥಾಪಕ ದಿ. ಮುದ್ದಣ ಶೆಟ್ಟಿ ಅವರ ಶತಮಾನೋತ್ಸವದ ನೆನಪಿಗಾಗಿ ಮಂಗಳವಾರ ತುಳು ಸಾಹಿತ್ಯ, ಸಂಸ್ಕೃತಿ ಬೊಕ್ಕ ಪುಲಮರ್ದ್‍ದ ಪೊಲಬು (ನಾಟಿ ಮದ್ದು) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಂಡತೀರ್ಥ ವಿದ್ಯಾಸಂಸ್ಥೆಗಳ ಸಂಚಾಲಕ ಡಾ. ಕೆ. ಪ್ರಭಾಕರ ಶೆಟ್ಟಿ ಮಾತನಾಡಿ, ತುಳು ಭಾಷೆ, ಸಂಸ್ಕೃತಿ, ಸಂಸ್ಕಾರ ಮತ್ತು ಆಚಾರ - ವಿಚಾರಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡೆಮಿ ನಡೆಸುತ್ತಿರುವ ಪ್ರಯತ್ನ ಶ್ಲಾಘನಾರ್ಹವಾಗಿದೆ. ಭಾಷೆ, ಸಂಸ್ಕೃತಿ ಮತ್ತು ಸಂಪ್ರಧಾಯವನ್ನು ಉಳಿಸುವಂತಹ ನಿಟ್ಟಿನ ಕಾರ್ಯಕ್ರಮಗಳಿಗೆ ದಂಡತೀರ್ಥ ವಿದ್ಯಾ ಸಂಸ್ಥೆಯಿಂದ ಸಂಪೂರ್ಣ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು. 

ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ಆಡಳಿತಾಧಿಕಾರಿ ಆಲ್ಭನ್ ರೋಡ್ರಿಗಸ್ ಅವರು ಸಂಸ್ಥೆಯ ಸಂಸ್ಥಾಪಕ ದಿ| ಮುದ್ದಣ್ಣ ಶೆಟ್ಟಿಯವರ ಕುರಿತಾಗಿ ಪರಿಚಯ ಭಾಷಣ ಮಾಡಿದರು. ಆಕಾಶವಾಣಿ ಕಲಾವಿದ ಕಾಪು ಸದಾನಂದ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ನೀಲಾನಂದ್ ನಾಯ್ಕ್ ಶುಭಾಶಂಸನೆಗೈದರು. 

ತುಳು ಸಂಸ್ಕೃತಿ - ಜಾನಪದ, ತುಳು ಸಾಹಿತ್ಯ ಮತ್ತು ಪುಲಮರ್ದ್ (ನಾಟಿ ಮದ್ದು ) ಎಂಬ ಮೂರು ಗೋಷ್ಟಿಗಳು ನಡೆಯಿತು. ಹಿರಿಯ ಸಂಶೋಧಕ ಕೆ.ಎಲ್. ಕುಂಡಂತಾಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಬೆನೆಟ್ ಜಿ. ಅಮ್ಮನ್ನ, ಪಾರಂಪರಿಕ ವೈದ್ಯೆ ಸ್ಟಾಲಿನ್ ಅಮ್ಮನ್ನ ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ದಂಡತೀರ್ಥ ಪದವಿ ಪೂರ್ವ ಕಾಲೇಜು ಮತ್ತು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ವಿಚಾರಗೋಷ್ಟಿಯಲ್ಲಿ ಪಾಲ್ಗೊಂಡರು.

ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಸಂಚಾಲಕ ಡಾ. ವೈ. ಎನ್. ಶೆಟ್ಟಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಎನ್‍ಎಸ್‍ಎಸ್ ಅ„ಕಾರಿ ಶಿವಣ್ಣ ಬಾಯಾರ್ ವಂದಿಸಿದರು. ಕನ್ನಡ ಭಾಷಾ ಉಪನ್ಯಾಸಕಿ ರಜನಿ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News