ಏಕಾಏಕಿ ಮದ್ಯಪಾನ ನಿಷೇಧ ಸಾಧ್ಯವಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2019-01-30 13:55 GMT

ಬೆಂಗಳೂರು, ಜ. 30: ರಾಜ್ಯದಲ್ಲಿ ಸಂಪೂರ್ಣ ಮದ್ಯಪಾನ ನಿಷೇಧ ಮಾಡಲು ಏಕಾಏಕಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾರಾಯಿ ನಿಷೇಧಿಸಿದ್ದೆ. ಮದ್ಯಪಾನ ನಿಷೇಧದ ವಿಚಾರದ ಬಗ್ಗೆ ಸಾಧಕ-ಬಾಧಕ ಕುರಿತು ಚರ್ಚೆ ಮಾಡಬೇಕಿದೆ ಎಂದು ಹೇಳಿದರು.

ಮದ್ಯ ಮಾರಾಟದಿಂದ ರಾಜ್ಯಕ್ಕೆ ಅತಿಹೆಚ್ಚು ಆದಾಯ ಬರುತ್ತಿದೆ. ಹೀಗಾಗಿ ಮದ್ಯಪಾನವನ್ನು ಏಕಾಏಕಿ ನಿಷೇಧಿಸಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ಅವರು ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News