ಆದಿವಾಸಿ ಬಾಲಕಿಯ ಅತ್ಯಾಚಾರ: ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ ದಾಖಲು

Update: 2019-01-30 16:10 GMT

ವಯನಾಡ್, ಜ.30: ಅಪ್ರಾಪ್ತ ವಯಸ್ಸಿನ ಆದಿವಾಸಿ ಬಾಲಕಿಯ ಮೇಲೆ ಒಂದು ವರ್ಷಗಳ ಕಾಲ ಅತ್ಯಾಚಾರ ನಡೆಸಿದ ಆರೋಪದಲ್ಲಿ ಕೇರಳದ ವಯನಾಡ್ ಜಿಲ್ಲೆಯ ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಂಗ್ರೆಸ್ ನಾಯಕ ಒ.ಎಂ ಜಾರ್ಜ್ ವಿರುದ್ಧ ಪೋಕ್ಸೊ ಕಾಯ್ದೆ, ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಜಾರ್ಜ್ ತಲೆಮರೆಸಿಕೊಂಡಿದ್ದು ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಮುಳಪಳ್ಳಿ ರಾಮಚಂದ್ರನ್ ತಿಳಿಸಿದ್ದಾರೆ.

ಹದಿನೇಳರ ಹರೆಯದ ಸಂತ್ರಸ್ತ ಬಾಲಕಿಯ ಹೆತ್ತವರು ಆರೋಪಿ ಜಾರ್ಜ್ ಬಳಿ ಕೆಲಸ ಮಾಡುತ್ತಿದ್ದರು ಬಾಲಕಿ ಕೆಲವೊಮ್ಮೆ ಅವರ ಜೊತೆ ತೆರಳುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ ಆರೋಪಿ ನಮ್ಮ ಮಗಳಿಗೆ ಫೋನ್‌ನಲ್ಲಿ ಬೆದರಿಕೆ ಹಾಕುವಾಗ ನಮಗೆ ಕೇಳಿಸಿಕೊಂಡಿತು. ಅದಲ್ಲದೆ ಆಕೆ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದ್ದಳು ಎಂದು ಸಂತ್ರಸ್ತೆಯ ತಂದೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಹಣ ಪಡೆದು ದೂರನ್ನು ವಾಪಸ್ ಪಡೆಯುವಂತೆ ಸ್ಥಳೀಯ ಕಾಂಗ್ರೆಸ್ ನಾಯಕ ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಸಂತ್ರಸ್ತೆಯ ಹೆತ್ತವರು ದೂರಿನಲ್ಲಿ ಆರೋಪಿಸಿದ್ದಾರೆ. ಆರೋಪಿ ನಾಯಕ ಬಾಲಕಿಯನ್ನು ಕಳೆದ ಫೆಬ್ರವರಿಯಿಂದ ಅತ್ಯಾಚಾರ ಮಾಡುತ್ತಿದ್ದ. ಇದಕ್ಕೆ ಸಂಬಂಧಿಸಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News