ಕೆಐಎಡಿಬಿ ಜಮೀನು ಡಿನೋಟಿಫೈ ಆರೋಪ: ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬಿಎಸ್‌ವೈ

Update: 2019-01-30 17:31 GMT

ಬೆಂಗಳೂರು, ಜ.30: ನಗರದ ದೇವರಬೀಸನಹಳ್ಳಿಯಲ್ಲಿನ ಸುಮಾರು 500 ಎಕರೆ ಜಮೀನನ್ನು ಡಿನೋಟಿಫಿಕೇಷನ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ನಗರದ ದೇವರಬೀಸನಹಳ್ಳಿಯಲ್ಲಿನ ಸುಮಾರು 500 ಎಕರೆ ಜಮೀನನ್ನು ಐಟಿ ಕಾರಿಡಾರ್ ನಿರ್ಮಾಣಕ್ಕಾಗಿ ಆಗಿನ ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿದ್ದ ಆರ್.ವಿ.ದೇಶಪಾಂಡೆ ಹಾಗೂ ಡಿಸಿಎಂ ಆಗಿದ್ದ ಬಿಎಸ್‌ವೈ ಅವರು ಡಿನೋಟಿಫೈ ಮಾಡಿ, ಖಾಸಗಿ ಕಂಪೆನಿಗಳಿಗೆ ಕೊಟ್ಟಿದ್ದರು. ಈ ಮೂಲಕ ಯುಡಿಯೂರಪ್ಪ, ರಾಜ್ಯ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ವಾಸುದೇವರೆಡ್ಡಿ ಎಂಬುವವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ ಲೋಕಾಯುಕ್ತ ಕೋರ್ಟ್, ಬಿಎಸ್‌ವೈ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶ ನೀಡಿತ್ತು. ಸದ್ಯ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ಆದರೆ, ಇದೇ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿತ್ತು. ಹೀಗಾಗಿ, ಬಿಎಸ್‌ವೈ ಕೂಡ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News