×
Ad

ಮಂಗಳೂರು ಅಲ್ಪಸಂಖ್ಯಾತ ಮೀನುಗಾರರ ಸಂಘಕ್ಕೆ ಜಮೀನು ಮಂಜೂರು

Update: 2019-01-30 23:30 IST

ಮಂಗಳೂರು, ಜ.30: ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘಕ್ಕೆ ಮಂಗಳೂರಿನಲ್ಲಿ 19 ಸೆಂಟ್ಸ್ ಜಮೀನು ಮಂಜೂರು ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಸಂಘದ ಪದಾಧಿಕಾರಿಗಳು ಈ ಹಿಂದೆ ಜಮೀನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದ್ದರು. ಸಂಘ ಸಲ್ಲಿಸಿದ ಸಾಮಾಜಿಕ ಚಟುವಟಿಕೆಗಳನ್ನು ಪರಿಗಣಿಸಿದ್ದ ಸಚಿವರು ನಡೆಸಿದ ಪ್ರಯತ್ನದ ಫಲವಾಗಿ ಜಮೀನು ಮಂಜೂರಾಗಿದೆ. ಈ ಜಮೀನಿನಲ್ಲಿ ಮಂಜುಗಡ್ಡೆ ಸ್ಥಾವರ, ಮೀನುಗಾರಿಕಾ ವಾಹನಗಳ ಸರ್ವಿಸ್ ಸೆಂಟರ್ ಮತ್ತು ಸಂಘದ ಕಚೇರಿ ಸ್ಥಾಪಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಚಿವ ಖಾದರ್ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News