23ನೇ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಅಗಲಿದ ನಾಯಕ ಜಾರ್ಜ್ ಫೆರ್ನಾಂಡಿಸ್‌ಗೆ ಸಮರ್ಪಣೆ
Update: 2019-01-30 23:33 IST
ಮಂಗಳೂರು, ಜ.30: ಮಂಗಳವಾರ ಅಗಲಿದ ಹಿರಿಯ ರಾಜಕೀಯ ಮುತ್ಸದ್ಧಿ, ಮಂಗಳೂರು ಸಂಜಾತ ದಿ.ಜಾರ್ಜ್ ಫೆರ್ನಾಂಡಿಸ್‌ರಿಗೆ 23ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮರ್ಪಣೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಹೇಳಿದ್ದಾರೆ.
ನಗರದ ಪುರಭವನದಲ್ಲಿ ನಡೆಯುತ್ತಿರುವ ಸಮ್ಮೇಳನದ ಉದ್ಘಾಟನಾ ವೇದಿಕೆಯಲ್ಲಿ ಜಾರ್ಜ್ ಫೆರ್ನಾಂಡಿಸ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಅವರು ಮಾತನಾಡಿದರು.
ಸಮ್ಮೇಳನಾಧ್ಯಕ್ಷ ಡಾ. ಬಿ.ಎಂ ಹೆಗ್ಡೆ, ಉದ್ಘಾಟಕ ನಾ. ಡಿಸೋಜಾ, ಸಾಹಿತಿಗಳಾದ ಎ.ಪಿ. ಮಾಲತಿ, ಏರ್ಯ ಲಕ್ಷ್ಮಿ ನಾರಾಯಣ ಆಳ್ವ, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಪ್ರೊ. ಎಂ.ಬಿ.ಪುರಾಣಿಕ್, ಎ.ಜೆ.ಶೆಟ್ಟಿ, ನೀಲಾವರ ಸುರೇಂದ್ರ ಅಡಿಗ, ಹರಿಕೃಷ್ಣ ಪುನರೂರು, ಡಾ. ಲಿಯೋ ಡಿಸೋಜ ಮತ್ತಿತರರು ಇದಕ್ಕೆ ಸಾಕ್ಷಿಯಾದರು.