ಫೆ.1: ಮೂಡಿಗೆರೆಯಲ್ಲಿ ತುಳು ಸಾಹಿತ್ಯ ಸಮ್ಮೇಳನ
Update: 2019-01-30 23:35 IST
ಮಂಗಳೂರು, ಜ.30: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಮತ್ತು ಮೂಡಿಗೆರೆಯ ತುಳುಕೂಟದ ವತಿಯಿಂದ ಚಿಕ್ಕಮಗಳೂರು ಜಿಲ್ಲಾ ತುಳು ಸಾಹಿತ್ಯ ಸಮ್ಮೇಳನ ಹಾಗೂ ಮೂಡಿಗೆರೆ ತುಳುಕೂಟದ ದಶಮಾನೋತ್ಸವ ಆಚರಣೆಯು ಫೆ.1ರಂದು ಸಂಜೆ 4ಕ್ಕೆ ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ಜರುಗಲಿದೆ.
ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಸಮ್ಮೇಳನವನ್ನು ಉದ್ಘಾಟಿಸುವರು. ಶಾಸಕ ಎಂ.ಪಿ. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುವರು.
ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಸಂಸದೆ ಶೋಭಾ ಕರಂದ್ಲಾಜೆ, ಬ್ಯಾರಿ ಅಕಾಡಮಿಯ ಅಧ್ಯಕ್ಷ ಕರಂಬಾರ್ ಮುಹಮ್ಮದ್ ಮತ್ತಿತರರು ಭಾಗವಹಿಸಲಿದ್ದಾರೆ. ಈ ಸಂದರ್ಭ ಎಂ.ಎ. ಶೇಷಗಿರಿ, ಎಂ.ಆರ್. ಜಗದೀಶ್, ಎಂ.ಜೆ. ದಿನೇಶ್, ಹಾಜಿ ಎ.ಸಿ. ಅಯ್ಯೂಬ್, ರಕ್ಷಿತರಾಜ್ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.