×
Ad

ಫೆಬ್ರವರಿ 6ರಿಂದ ಶಬರಿಮಲೆ ಆದೇಶ ಪರಿಶೀಲನೆ ಅರ್ಜಿ ವಿಚಾರಣೆ: ಸುಪ್ರೀಂ ಕೋರ್ಟ್

Update: 2019-01-31 21:03 IST

ಹೊಸದಿಲ್ಲಿ,ಜ.31: ಶಬರಿಮಲೆ ಆದೇಶವನ್ನು ಪುನರ್‌ಪರಿಶೀಲಿಸುವಂತೆ ಹಾಕಲಾದ ಅರ್ಜಿಗಳ ವಿಚಾರಣೆಯನ್ನು ಫೆಬ್ರವರಿ 6ರಿಂದ ನಡೆಸಲು ಸರ್ವೋಚ್ಚ ನ್ಯಾಯಾಲಯ ನಿರ್ಧರಿಸಿದೆ. ಎಲ್ಲ ವಯೋಮಾನದ ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸಲು ಅವಕಾಶ ನೀಡುವ ಸರ್ವೋಚ್ಚ ನ್ಯಾಯಾಲಯದ ಸೆಪ್ಟಂಬರ್ ಆದೇಶವನ್ನು ಪುನರ್‌ಪರಿಶೀಲಿಸುವಂತೆ ಕೋರಿ ಹಾಕಲಾಗಿರುವ 48 ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಭಾರತೀಯ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯಿ ನೇತೃತ್ವದ ಐದು ಸದಸ್ಯರ ಪೀಠ ಫೆಬ್ರವರಿ ಆರರಿಂದ ಈ ಮನವಿಗಳ ವಿಚಾರಣೆ ನಡೆಸಲಿದೆ. ನ್ಯಾಯಾಧೀಶೆ ಇಂದು ಮಲ್ಹೋತ್ರ ವೈದ್ಯಕೀಯ ರಜೆಯಲ್ಲಿರುವ ಕಾರಣ ಜನವರಿ 22ರಂದು ಕೈಗೆತ್ತಿಕೊಳ್ಳಬೇಕಿದ್ದ ಪುನರ್‌ಪರಿಶೀಲನೆ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿತ್ತು. ಸರ್ವೋಚ್ಚ ನ್ಯಾಯಾಲಯದ ಆದೇಶವು 10ರಿಂದ 50ರ ಹರೆಯದ ಒಳಗಿನ ಮಹಿಳೆಯರೂ ಶಬರಿಮಲೆ ದೇಗುಲ ಪ್ರವೇಶಕ್ಕೆ ಅನುಮತಿ ನೀಡುತ್ತದೆ. ಆದರೆ ಈ ಆದೇಶವನ್ನು ಅಯ್ಯಪ್ಪ ಸ್ವಾಮಿ ಭಕ್ತರು ತೀವ್ರವಾಗಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News