×
Ad

ಉಡುಪಿ: ಫೆ.3, 4 ರಂದು ಉಸ್ತುವಾರಿ ಸಚಿವರ ಪ್ರವಾಸ

Update: 2019-01-31 21:05 IST

ಉಡುಪಿ, ಜ.31:ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಫೆ.3 ಮತ್ತು 4ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆ.3ರಂದು ಬೆಳಗ್ಗೆ 10:30ಕ್ಕೆ ಉಡುಪಿ ಅಜ್ಜರಕಾಡು ಮಹಾತ್ಮ ಗಾಂಧಿ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿಗಳೊಡನೆ ಜಿಲ್ಲೆಯಲ್ಲಿ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಅಪರಾಹ್ನ 2:00ಕ್ಕೆ ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಮಹಾಸಮಾವೇಶದಲ್ಲಿ ಮುಖ್ಯುಂತ್ರಿಗಳೊಂದಿಗೆ ಭಾಗವಹಿಸುವರು.

ಫೆ.4ರಂದು ಬೆಳಗ್ಗೆ 10:00ಕ್ಕೆ ಬೈಂದೂರು ಕ್ಷೇತ್ರ ವ್ಯಾಪ್ತಿಯ ಹಟ್ಟಿಯಂಗಡಿ ಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆ, 11ಕ್ಕೆ ಕೆರಾಡಿಯಲ್ಲಿ ಎಎನ್‌ಎಂ ಕೇಂದ್ರದ ಉದ್ಘಾಟನೆ, ಅಪರಾಹ್ನ 12ಕ್ಕೆ ತ್ರಾಸಿಯಲ್ಲಿ ಹಕ್ಕುಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಂಗಳೂರಿಗೆ ತೆರಳುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News