×
Ad

ವಿಜಯಾ ಬ್ಯಾಂಕ್ ವಿಲೀನಕ್ಕೆ ಜೆಡಿಎಸ್ ಖಂಡನೆ

Update: 2019-01-31 21:35 IST

ಉಡುಪಿ,ಜ.31: ಕೇಂದ್ರ ಸರ್ಕಾರ, ಕರಾವಳಿ ಮೂಲದ ವಿಜಯಾ ಬ್ಯಾಂಕನ್ನು ಇನ್ನೆರಡು ಬ್ಯಾಂಕ್‌ಗಳೊಂದಿಗೆ ವಿಲೀನಗೊಳಿಸಿ ಗಜೆಟ್ ನೋಟಿಫಿಕೇಶನ್ ಹೊರಡಿಸಿ ರುವ ನಿರ್ಧಾರ ಅವೈಜ್ಞಾನಿಕವಾಗಿದೆ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಖಂಡಿಸಿದೆ.

ವಿಜಯಾ ಬ್ಯಾಂಕ್ ಸ್ಥಳೀಯ ರೈತರಿಗೆ, ಮಧ್ಯಮ ವರ್ಗದವರಿಗೆ, ಬಡವರಿಗೆ ಸಹಕಾರಿಯಾಗಿ ಬೆಳೆದು ಬಂದಿದೆ. ದೇಶದ ಕೆಲವೇ ಲಾಭದಾಯಕ ಬ್ಯಾಂಕ್ ಗಳಲ್ಲಿ ವಿಜಯಾ ಬ್ಯಾಂಕ್ ಒಂದಾಗಿದೆ. ಇದನ್ನು ನಷ್ಟದಲ್ಲಿರುವ ಗುಜರಾತ್‌ನ ಬ್ಯಾಂಕ್ ಆಫ್ ಬರೋಡಾ ಹಾಗೂ ದೇನಾ ಬ್ಯಾಂಕ್‌ಗಳೊಂದಿಗೆ ವಿಲೀನ ಗೊಳಿಸುವ ನಿರ್ಧಾರ ಅತ್ಯಂತ ದುರದೃಷ್ಟಕರ. ಈ ಆದೇಶವನ್ನು ಕೂಡಲೇ ಹಿಂಪಡೆಯ ಬೇಕೆಂದು ಜೆಡಿಎಸ್ ಆಗ್ರಹಿಸಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರದ ನಡೆಯನ್ನು ವಿರೋಧಿಸಿ ಫೆ.2ರಂದು ಮುಲ್ಕಿ ಕಾರ್ನಾಡಿನ ಗಾಂಧಿ ಮೈದಾನದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ಉಡುಪಿ ಜಿಲ್ಲಾ ಜನತಾದಳವು ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಉಡುಪಿ ಜಿಲ್ಲಾ ಜೆಡಿಎಸ್‌ನ ಜಿಲ್ಲಾಧ್ಯಕ್ಷ ಯೋಗೀಶ್.ವಿ.ಶೆಟಿ್ಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News