×
Ad

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿಚಾರ: ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

Update: 2019-01-31 22:53 IST

ಬೆಂಗಳೂರು, ಜ.31: ಕಳೆದ ಸೆಪ್ಟಂಬರ್‌ನಲ್ಲಿ ಚುನಾವಣೆ ನಡೆದಿದ್ದ ರಾಜ್ಯದ ಮೂರು ಮಹಾನಗರ ಪಾಲಿಕೆಗಳು ಸೇರಿ ನೂರಕ್ಕೂ ಅಧಿಕ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮತ್ತೆ ಅಡ್ಡಿಯುಂಟಾಗಿದ್ದು, ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸದಂತೆ ಹೈಕೋರ್ಟ್ ಸರಕಾರಕ್ಕೆ ಮಧ್ಯಂತರ ಆದೇಶ ನೀಡಿದೆ.

ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ 2018 ಸೆ.3ರಂದು ಸರಕಾರ ಹೊರಡಿಸಿರುವ ಅಧಿಸೂಚನೆ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ ಜ.18ರಂದು ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿತ್ತು.

 ಇದನ್ನು ಪ್ರಶ್ನಿಸಿ ರಾಯಚೂರು ಜಿಲ್ಲೆ ಸಿಂಧನೂರಿನ ಆಲಂಪಾಷಾ, ಗುರಮಿಠಕಲ್‌ನ ಪವಿತ್ರಮ್ಮ ಸೇರಿ ವಿವಿಧ ಸ್ಥಳೀಯ ಸಂಸ್ಥೆಗಳು ಸದಸ್ಯರು ಸಲ್ಲಿಸಿರುವ ಮೇಲ್ಮನವಿಗಳನ್ನು ಗುರುವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠ, ಈ ಮಧ್ಯಂತರ ಆದೇಶ ನೀಡಿದೆ. ಇದೇ ವೇಳೆ ಮೇಲ್ಮನವಿ ಸಂಬಂಧ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಫೆ.4ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News