×
Ad

ಫೆ.1: ‘ನನ್ನ ಜಿಲ್ಲೆ-ನನ್ನ ಕನಸು’ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ

Update: 2019-01-31 22:59 IST

ಮಂಗಳೂರು, ಜ.31: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ‘ನನ್ನ ಜಿಲ್ಲೆ-ನನ್ನ ಕನಸು’ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಮತ್ತು ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರೊಂದಿಗೆ ಪತ್ರಕರ್ತರ ಸಂವಾದ ಕಾರ್ಯಕ್ರಮ ಫೆ.1ರಂದು ಪೂರ್ವಾಹ್ನ 11ಕ್ಕೆ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆಯಲಿದೆ.

ಪ್ರಬಂಧ ಸ್ಪರ್ಧೆಯಲ್ಲಿ ಪದವಿ ವಿಭಾಗದಲ್ಲಿ ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ವಾಣಿ (ಪ್ರಥಮ) ಹಾಗೂ ಮಂಗಳೂರು ಕರಾವಳಿ ಫಾರ್ಮಸಿ ಕಾಲೇಜಿನ ಆಯಿಶತ್ ಸಫ್ವಾನ (ದ್ವಿತೀಯ) ಬಹುಮಾನ ಪಡೆದಿರುತ್ತಾರೆ.

ಪದವಿ ಪೂರ್ವ ವಿಭಾಗದಲ್ಲಿ ಮಂಗಳೂರು ಸಂತ ಆಗ್ನೆಸ್ ಪದವಿ ಪೂರ್ವ ಕಾಲೇಜಿನ ಎನ್.ಆರ್.ಅನನ್ಯಾ ರೈ (ಪ್ರಥಮ) ಹಾಗೂ ಪುತ್ತೂರಿನ ಕುಂಬ್ರ ಮರ್ಕಝುಲ್ ಹುದಾ ಪದವಿ ಪೂರ್ವ ಕಾಲೇಜಿನ ಖದೀಜತ್ ದಿಲ್ಶಾನಾ (ದ್ವಿತೀಯ) ಬಹುಮಾನ ಪಡೆದಿದ್ದಾರೆ.

ಗಣಪತಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಚಂದ್ರಕಲಾ ನಂದಾವರ, ಸುರತ್ಕಲ್ ಗೋವಿಂದದಾಸ್ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಚಿತ್ರಾಪುರ, ಶ್ರೀನಿವಾಸ್ ಕಾಲೇಜ್ ಆಫ್ ಎಜುಕೇಶನ್‌ನ ಉಪನ್ಯಾಸಕಿ ಡಾ.ವಿಜಯಲಕ್ಷ್ಮಿ ನಾಯಕ್ ಮತ್ತು ಪತ್ರಕರ್ತೆ ಡಾ.ಸೀತಾಲಕ್ಷ್ಮಿಕರ್ಕಿಕೋಡಿ ಪ್ರಬಂಧ ಸ್ಪರ್ಧೆಯ ತೀರ್ಪುಗಾರರಾಗಿದ್ದರು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News