ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಾಯ
Update: 2019-01-31 23:11 IST
ಬಂಟ್ವಾಳ, ಜ. 31: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡು ಅಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ.
ಇಲ್ಲಿನ ಸರಪಾಡಿ ನಿವಾಸಿ ಚಂದ್ರಹಾಸ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ದ್ವಿಚಕ್ರ ವಾಹನ ಸವಾರ ಧರ್ಮಸ್ಥಳ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಜಕ್ರಿಬೆಟ್ಟು ತಿರುವಿನಲ್ಲಿ ಲಾರಿ ಢಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿದ ಮುಂದಿಕ್ಕೆ ಚಲಿಸಿದ ಲಾರಿ ಪಕ್ಕದ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ. ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ದ್ವಿಚಕ್ರ ವಾಹನ ಸವಾರನಿಗೆ ಗಾಯವಾಗಿದ್ದು, ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಎಸ್ಸೈ ಮಂಜುಳಾ, ಎಸ್ಸೈ ಕುಟ್ಟಿ, ಸಿಬ್ಬಂದಿ ಪ್ರಶಾಂತ್ ಬೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.