ದೇರಳಕಟ್ಟೆ :ಮೋರ್ ಸೂಪರ್ ಮಾರ್ಕೆಟ್‌ನಲ್ಲಿ ಬೆಂಕಿ ಅವಘಡ

Update: 2019-02-01 04:49 GMT

ಉಳ್ಳಾಲ, ಫೆ.1: ದೇರಳಕಟ್ಟೆಯಲ್ಲಿರುವ ಮೋರ್ ಸೂಪರ್ ಮಾರ್ಕೆಟ್‌ನಲ್ಲಿ ಗುರುವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ ಘಟನೆ ವರದಿಯಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಮಳಿಗೆಯಲ್ಲಿದ್ದ ಫ್ರೀಝರ್ ವೊಂದು ಸ್ಫೋಟಗೊಂಡಿದ್ದೇ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. ಇದರಿಂದಾಗಿ ಮಳಿಗೆಯಿಡೀ ಹೊಗೆ ಹರಡಿತ್ತು. ಇಂದು ಬೆಳಗ್ಗೆ ಮಳಿಗೆಯ ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಫ್ರೀಝರ್‌ಗೆ ಮಾತ್ರ ಹಾನಿಯಾಗಿದ್ದು, ಬೇರೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News