ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

Update: 2019-02-01 13:53 GMT

ದಾವಣಗೆರೆ,ಫೆ.1: ಹೊಸಕೆರೆ ಬಳಿಯ ರಂಗಯ್ಯದುರ್ಗ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿರುವ ಸುಮಾರು 60 ವರ್ಷ ಪ್ರಾಯದ ಮಹಿಳೆಯ ಶವ ಪತ್ತೆಯಾಗಿದೆ.  

ಜಿಲ್ಲೆಯ ಜಗಳೂರು ತಾಲೂಕಿನ ಹೊಸಕೆರೆ ಗ್ರಾಮ ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಿಳಿಚೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News