×
Ad

ರೈತರಿಗೆ ನೀಡುವ ನೆರವಿಗೆ ಜಮೀನಿನ ಮಿತಿ ಹೇರಿದ್ದು ಸರಿಯಲ್ಲ: ಸಚಿವ ಆರ್.ವಿ.ದೇಶಪಾಂಡೆ

Update: 2019-02-01 20:00 IST

ಬೆಂಗಳೂರು, ಫೆ.1: ಕೇಂದ್ರ ಸರಕಾರದ ಮಧ್ಯಂತರ ಆಯವ್ಯಯ ಪತ್ರದಲ್ಲಿ ರೈತರಿಗೆ ವರ್ಷಕ್ಕೆ 6,000 ರೂ. ನೆರವು ನೀಡುವ ಯೋಜನೆಗೆ 2 ಹೆಕ್ಟೇರಿನ ಮಿತಿ ಹೇರಿದ್ದು ಸರಿಯಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಶುಕ್ರವಾರ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಮಂಡಿಸಿದ ಆಯವ್ಯಯದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇಂದು ಇಡೀ ದೇಶದಲ್ಲಿ ಕೃಷಿ ವಲಯವು ಸಂಕಷ್ಟದಲ್ಲಿದ್ದು, ರೈತರೆಲ್ಲರೂ ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗ, ಜಮೀನಿನ ಒಡೆತನದ ಮೇಲೆ ಯಾವುದೇ ಮಿತಿ ಹೇರದೆ ಎಲ್ಲ ರೈತರಿಗೂ ಈ ನೆರವನ್ನು ನೀಡಬೇಕಾಗಿತ್ತು ಎಂದು ಅವರು ಅಭಿಪ್ರಾಯಿಸಿದರು.

ಇದೇ ರೀತಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರು 60 ವರ್ಷಗಳನ್ನು ಪೂರೈಸಿದ ನಂತರ ಮಾಸಿಕ ಕೇವಲ 3,000 ರೂ. ಪಿಂಚಣಿ ಘೋಷಿಸಲಾಗಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಗೆ ಕೊಡಬೇಕಾಗಿತ್ತು. ಹೀಗೆ ಮಾಡಿದರೆ ಮಾತ್ರ ಅಸಂಘಟಿತ ವಲಯದ ಕಾರ್ಮಿಕರಿಗೆ ನಿಜವಾದ ನೆರವು ಸಿಗುತ್ತಿತ್ತು ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ಅಭಿಪ್ರಾಯಿಸಿದ್ದಾರೆ.

ಕೇಂದ್ರ ಸರಕಾರ ಆಯವ್ಯಯದಲ್ಲಿ ಮೀನುಗಾರ ಸಮುದಾಯದ ನೆರವಿಗೆ ಹೊಸದಾಗಿ ಪ್ರತ್ಯೇಕ ಇಲಾಖೆಯನ್ನು ಆರಂಭಿಸುವುದಾಗಿ ಘೋಷಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ.

-ಆರ್.ವಿ.ದೇಶಪಾಂಡೆ, ಕಂದಾಯ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News