×
Ad

ಬೈಕ್‍ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Update: 2019-02-01 22:47 IST

ಶಿವಮೊಗ್ಗ, ಫೆ. 1: ಬೈಕ್‍ನಿಂದ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡು ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕಾರಿಪುರ ಮೂಲದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿರುವ ಘಟನೆ ವರದಿಯಾಗಿದೆ.

ಶಿಕಾರಿಪುರದ ಶೋಭಾ (40) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಇವರು ಪತಿ ಶಿವಕುಮಾರ್ ಚಲಾಯಿಸುತ್ತಿದ್ದ ಬೈಕ್‍ನಲ್ಲಿ ಹಿಂಬದಿ ಕುಳಿತುಕೊಂಡು ತೆರಳುತ್ತಿದ್ದಾಗ, ಹೊಸಮುಗುಳುಗೆರೆ ಗ್ರಾಮದ ಬಳಿ ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಹಂಪ್ ವೊಂದರ ಬಳಿ ಬೈಕ್ ನಿಯಂತ್ರಣ ಕಳೆದುಕೊಂಡಾಗ ಶೋಭಾ ಕೆಳಕ್ಕೆ ಬಿದ್ದಿದ್ದರು.

ಇವರ ತಲೆಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿತ್ತು. ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‍ಗೆ ದಾಖಲಿಸಲಾಗಿತ್ತು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News