ವಿಜಯಪುರ: ಬೈಕಿಗೆ ಲಾರಿ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು
Update: 2019-02-01 22:57 IST
ವಿಜಯಪುರ,ಫೆ.1: ಬೈಕಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಜಯಪುರ ನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸ್ಟೇಷನ್ ರಸ್ತೆಯಲ್ಲಿ ನಡೆದಿದೆ.
ನಾವದಗೇರಿ ಓಣಿಯ ಶ್ರೀನಿವಾಸ ಕುಲ್ಕರ್ಣಿ(27) ಮೃತ ವ್ಯಕ್ತಿ. ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಶ್ರೀನಿವಾಸ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಮೃತ ಸವಾರನ ರುಂಡ ದೇಹದಿಂದ ಬೇರ್ಪಟ್ಟಿದೆ ಎನ್ನಲಾಗಿದೆ.
ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ನೀಡಿ ಶವ ತೆರವು ಮಾಡಿದ್ದು, ಅಪಘಾತದ ನಂತರ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.