ಚಿತ್ರಗಳನ್ನು ವೀಕ್ಷಿಸದೆ ಚಲನಚಿತ್ರೋತ್ಸವಕ್ಕೆ ಆಯ್ಕೆ: ಆರೋಪ

Update: 2019-02-01 17:40 GMT

ಬೆಂಗಳೂರು, ಫೆ.1: ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡ ಚಲನಚಿತ್ರಗಳನ್ನು ಆಯ್ಕೆ ಮಾಡುವ ಸಮಿತಿ 25 ಚಿತ್ರಗಳನ್ನು ವೀಕ್ಷಿಸದೆ ನಿರ್ಲಕ್ಷ್ಯ ಮಾಡಿದೆ ಎಂದು ದೇವಕಿ ಫಿಲಂಸ್ ಸಂಸ್ಥೆಯ ಎಸ್.ಕುಮಾರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಚಿತ್ರೋತ್ಸವದಲ್ಲಿ ಭಾಗವಹಿಸಲು 90 ಚಿತ್ರಗಳು ಆಯ್ಕೆ ಸಮಿತಿ ಮುಂದೆ ಬಂದಿದ್ದವು. ಆದರೆ, ಕೇವಲ 65 ಚಿತ್ರಗಳನ್ನು ಮಾತ್ರ ಸಮಿತಿ ವೀಕ್ಷಿಸಿ 10 ಚಿತ್ರಗಳನ್ನು ಆಯ್ಕೆ ಮಾಡಿದೆ. 25 ಚಿತ್ರಗಳು ಕನ್ನಡ ವಿಭಾಗದ ಆಯ್ಕೆ ಸಮಿತಿ ಮುಂದೆ ಪ್ರದರ್ಶನವೆ ಆಗದೆ ಆರು ಚಿತ್ರಗಳು ಸೇರ್ಪಡೆಯಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.

ನಿರ್ಮಾಪಕರಿಂದ ಶುಲ್ಕ ಕಟ್ಟಿಸಿಕೊಂಡು ಈ ರೀತಿ ಅನ್ಯಾಯ ಮಾಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿಗಳು ತಕ್ಷಣವೇ ಮಧ್ಯಪ್ರವೇಶ ಮಾಡಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News