ವಿಧಾನಸೌಧ: ವಿಪಕ್ಷ ಮುಖ್ಯ ಸಚೇತಕ ಸುನೀಲ್ ಕುಮಾರ್ ಕೊಠಡಿಯಲ್ಲಿ ಬೆಂಕಿ

Update: 2019-02-02 14:04 GMT

ಬೆಂಗಳೂರು, ಫೆ. 2: ವಿಧಾನಸೌಧದ ಮೊದಲ ಮಹಡಿಯಲ್ಲಿನ ವಿಪಕ್ಷ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್ ಅವರ ಕೊಠಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಶನಿವಾರ ಮೊದಲ ಮಹಡಿಯಲ್ಲಿ ಕೊಠಡಿ ಸಂಖ್ಯೆ 146ರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಸ್ವಿಚ್ ಬೋರ್ಡ್‌ನಲ್ಲಿ ವಿದ್ಯುತ್ ಕಾಣಿಸಿಕೊಂಡಿದೆ. ಕೊಠಡಿಯಲ್ಲಿದ್ದ ಸಿಬ್ಬಂದಿ ಕೂಡಲೇ ಹೊರಗೆ ಬಂದಿದ್ದಾರೆ. ತಕ್ಷಣವೇ ವಿದ್ಯುತ್ ಸ್ಥಗಿತಗೊಳಿಸಿದ್ದಾರೆ. ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಕೂಡಲೇ ಧಾವಿಸಿ ಪರಿಶೀಲಿಸಿದ್ದಾರೆ. ಎಲೆಕ್ಟ್ರಿಷಿಯನ್ ಬಂದು ವಿದ್ಯುತ್ ಸ್ಥಗಿತಗೊಳಿಸಿ ಸ್ವಿಚ್ ಬಾಕ್ಸ್ ದುರಸ್ತಿ ಮಾಡಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಕೆಲಕಾಲ ಆತಂಕಗೊಂಡಿದ್ದ ಸಿಬ್ಬಂದಿ ಆ ಬಳಿಕ ನಿರಾಳರಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News