ಮೈಮೇಲೆ ಹರಿದ ಕಾಂಕ್ರಿಟ್ ಲಾರಿ: ಕಾರ್ಮಿಕನ ಸ್ಥಿತಿ ಚಿಂತಾಜನಕ

Update: 2019-02-02 14:32 GMT

ಮಡಿಕೇರಿ, ಫೆ. 2: ಕಾಂಕ್ರಿಟ್ ಸಾಗಿಸುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರ್ಮಿಕನೊಬ್ಬ ತೀವ್ರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.

ರಾಮಣ್ಣ ಎಂಬವರೇ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ. ಮೂಲತಃ ಬಳ್ಳಾರಿಯ ಇವರು ಗರ್ವಾಲೆಯಲ್ಲಿರುವ ತೋಟದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ.

ಮಾದಾಪುರ ಸಿಂಡಿಕೇಟ್ ಬ್ಯಾಂಕ್ ಮುಂಭಾಗದಲ್ಲಿ ಮೊಬೈಲ್‍ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಸಾಗಿಸುತ್ತಿದ್ದ ಲಾರಿಯ ಹಿಂಬದಿ ಚಕ್ರ ರಾಮಣ್ಣನ ಮೇಲೆ ಹರಿದಿದೆ. ರಾಮಣ್ಣನಿಗೆ ಮಡಿಕೇರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News