ಪ.ಬಂಗಾಳ: ಬಿಜೆಪಿ-ಟಿಎಂಸಿ ಕಾರ್ಯಕರ್ತರ ಘರ್ಷಣೆ

Update: 2019-02-02 14:44 GMT

ಕೋಲ್ಕತಾ, ಫೆ.2: ಶನಿವಾರ ಪ್ರಧಾನಿ ಮೋದಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವುದಕ್ಕೂ ಮೊದಲು ರಾಜ್ಯದ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ದುರ್ಗಾಪುರ ಗ್ರಾಮದಲ್ಲಿ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದೆ. ಮೋದಿ ರ್ಯಾಲಿ ಆಯೋಜಿಸಲಾಗಿದ್ದ ಸ್ಥಳಕ್ಕೆ ಶುಕ್ರವಾರ ರಾತ್ರಿ ಬಂದ ಟಿಎಂಸಿ ಕಾರ್ಯಕರ್ತರು ಬೆದರಿಕೆಯೊಡ್ಡಿ ಪ್ರಧಾನಿಯ ಪೋಸ್ಟರ್‌ಗಳನ್ನು ಹರಿದು ಹಾಕಿ ಆ ಜಾಗದಲ್ಲಿ ಟಿಎಂಸಿ ನಾಯಕರ ಫೋಟೋ ಅಂಟಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೆೋಪಿಸಿದ್ದಾರೆ.

ಘಟನೆಯಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಇದನ್ನು ಸ್ಥಳೀಯ ಟಿಎಂಸಿ ನಾಯಕರು ನಿರಾಕರಿಸಿದ್ದಾರೆ. ಮೋದಿ ರ್ಯಾಲಿ ನಡೆಸಿದ ಸ್ಥಳದಲ್ಲಿದ್ದ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪೋಸ್ಟರ್‌ಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಣ್ಣ ಎರಚಿದಾಗ ಟಿಎಂಸಿ ಕಾರ್ಯಕರ್ತರು ಆಕ್ಷೇಪಿಸಿದ್ದಾರೆ. ಆಗ ಬಿಜೆಪಿ ಕಾರ್ಯಕರ್ತರು ನಡೆಸಿದ ಹಲ್ಲೆಯಿಂದ ಹಲವು ಟಿಎಂಸಿ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಎರಡೂ ಪಕ್ಷಗಳ ಕಾರ್ಯಕರ್ತರ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News