ಬಾಲಕಿ ಅತ್ಯಾಚಾರ: ಪೋಕ್ಸೋ ಕಾಯ್ದೆಯಡಿ ಆರೋಪಿ ಸೆರೆ

Update: 2019-02-02 15:22 GMT

ಕಾರ್ಕಳ, ಫೆ2: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಪೊಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.

ಬಜಗೋಳಿಯ ಶರತ್ ಬಂಧಿತ ಆರೋಪಿ. ಈತ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ 16ವರ್ಷ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮಾಳ ಗ್ರಾಮದ ಚರ್ಚ್ ಬಳಿಯ ಹಾಡಿಯಲ್ಲಿ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ್ದನು ಎಂದು ದೂರಲಾಗಿದೆ.

ಈ ಬಗ್ಗೆ ಸಂತ್ರಸ್ತೆಯ ತಾಯಿ ನೀಡಿದ ದೂರಿನಂತೆ ಜ.30ರಂದು ಪ್ರಕರಣ ದಾಖಲಿಸಿಕೊಂಡ ಕಾರ್ಕಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕಲಂ 376 ಐಪಿಸಿ ಮತ್ತು ಕಲಂ 4,6,12 ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಉಡುಪಿಯ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News