ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲನ ಬಂಧನ

Update: 2019-02-02 18:25 GMT

ಹನೂರು, ಫೆ.2: ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದಡಿ ಇಲ್ಲಿಗೆ ಸಮೀಪದ ಮಂಗಲ ಏಕಲವ್ಯ ವಸತಿ ಶಾಲೆಯ ಪ್ರಾಂಶುಪಾಲ ಲೋಕೇಶ್ ವಿರುದ್ಧ ಪೊಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಹನೂರು ಠಾಣಾ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಪ್ರಾಂಶುಪಾಲನಿಮದ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಸತಿ ಶಾಲೆಗೆ ಭೇಟಿ ನೀಡಿದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಕೃಷ್ಣಪ್ಪ, ಇಲ್ಲಿನ ವಿದ್ಯಾರ್ಥಿನಿಯರು ಹಾಗೂ ವಸತಿ ಶಾಲೆಯ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದು ವಿಚಾರಣೆ ನೆಡೆಸಿದ ಸಂದರ್ಭದಲ್ಲಿ ಕೆಲವು ಮಾಹಿತಿಗಳು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಚಾಮರಾಜನಗರ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಹರೀಶ್ ಕುಮಾರ್ ನಿರ್ದೇಶನದಂತೆ ಹನೂರು ಪೊಲೀಸ್‌ ಠಾಣೆಗೆ ಕೃಷ್ಣಪ್ಪ ದೂರು ನೀಡಿದ್ದಾರೆ.

ಕಳೆದ ತಿಂಗಳು ಶಾಲಾ ಶೈಕ್ಷಣಿಕ ಪ್ರವಾಸಕೈಗೊಂಡಿದ್ದ ಸಂದರ್ಭದಲ್ಲಿ ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳಿಗೆ ಪ್ರತ್ಯಕ ಬಸ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಪ್ರವಾಸದ ವೇಳೆ ಪ್ರಾಂಶುಪಾಲ ಹೆಣ್ಣು ಮಕ್ಕಳು ಇದ್ದ ಬಸ್‌ನಲ್ಲಿ ಸಂಚರಿಸಿದ್ದು ಅಲ್ಲದೆ ಹೆಣ್ಣು ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಾಂಶುಪಾಲ ಲೋಕೇಶ್ ಮಕ್ಕಳಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಇಬ್ಬರು ವಿದ್ಯಾರ್ಥಿನಿಯರ ಪೋಷಕರು ಶಾಲೆಯ ಉಪನ್ಯಾಸಕಿಯರಿಗೆ ದೂರು ನೀಡಿದ್ದರು. ಉಪನ್ಯಾಸಕರು ಇದನ್ನು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆ ಬಳಿಕ ಪ್ರಾಶುಂಪಾಲರ ವಿರುದ್ಧ ಲೈಂಗಿಕ ದೌರ್ಜನ್ಯದ ಹಲವು ದೂರುಗಳು ಕೇಳಿ ಬಂದಿದೆ ಎನ್ನಲಾಗಿದೆ.

ಪೊಲೀಸ್ ಠಾಣೆಯಲ್ಲಿ ಪ್ರಾಂಶುಪಾಲನ ಹೈಡ್ರಾಮಾ
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸರು ಪ್ರಾಂಶುಪಾಲ ಲೋಕೇಶ್‌ನನ್ನು ತಡ ರಾತ್ರಿ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆತಂದಾಗ ಆತ ಠಾಣೆಯಲ್ಲಿ ಪೊಲೀಸರ ಮುಂದೆಯೇ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ವಿರುದ್ಧ ರಂಪಾಟ ನಡೆಸಿದ್ದಾನೆ ಎನ್ನಲಾಗಿದೆ. ಅಲ್ಲದೆ ಠಾಣೆಯ ಟೇಬಲ್ ಮೇಲೆ ಇಡಲಾಗಿದ್ದ ಗಾಜನ್ನು ಕೈ ಹಾಗೂ ತಲೆಯಿಂದ ಗುದ್ದಿದ್ದು ಈ ಸಂದರ್ಭದಲ್ಲಿ ಆತನಿಗೆ ಗಾಯ ಉಂಟಾಗಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News