ಮೈಸೂರು: ಗಾಂಧೀಜಿ ಪ್ರತಿಕೃತಿಗೆ ಗುಂಡಿಕ್ಕಿದ ಕೃತ್ಯ ಖಂಡಿಸಿ ಎಸ್ ಡಿಪಿಐ ಧರಣಿ

Update: 2019-02-02 18:47 GMT

ಮೈಸೂರು,ಫೆ.2: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮೈಸೂರು ಜಿಲ್ಲಾ ಸಮಿತಿ ವತಿಯಿಂದ 'ಗೋಡ್ಸೆಯ ಮರುಜನ್ಮ ಅನುಮತಿಸಲಾರೆವು' ಎಂಬ ಘೋಷಣೆಯೊಂದಿಗೆ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

ದೇಶದ ಮೊದಲ ಭಯೋತ್ಪಾದನಾ ಕೃತ್ಯವಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಹತ್ಯೆಗೈದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆಯನ್ನು ವೈಭವೀಕರಿಸುತ್ತಿರುವ ಮತ್ತು ಗಾಂಧೀಜಿ ಪ್ರತಿಕೃತಿಗೆ ಗುಂಡಿಕ್ಕಿ ಸಂಭ್ರಮಾಚರಿಸಿದ ಹಿಂದೂ ಮಹಾಸಭಾ ಕಾರ್ಯಕರ್ತರ ಭಯೋತ್ಪಾದನಾ ಕೃತ್ಯವನ್ನು ಖಂಡಿಸಿ 'ಗೋಡ್ಸೆಯ ಮರುಜನ್ಮ ಅನುಮತಿಸಲಾರೆವು' ಎಂಬ ಘೋಷಣೆಯೊಂದಿಗೆ ಎಸ್.ಡಿ.ಪಿ.ಐ ರಾಷ್ಟ್ರವ್ಯಾಪ್ತಿ ಪ್ರತಿಭಟನೆಗೆ ಕರೆ ನೀಡಿದ ಹಿನ್ನಲೆಯಲ್ಲಿ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಎಸ್ಡಿಪಿಐ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್, ಜಿಲ್ಲಾಧ್ಯಕ್ಷರಾದ ಆಝಾಂ ಪಾಷ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾವಿದ್ ಪಾಷ, ಎಸ್ಡಿಪಿಐ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ಮೈಸೂರು ಜಿಲ್ಲಾ ಉಪಾಧ್ಯಕ್ಷರಾದ ಆಲೂರು ಮಲಣ್ಣ , ಮೈಸೂರು ಜಿಲ್ಲಾ ಕಾರ್ಯದರ್ಶಿ ಕೌಶನ್ ಬೇಗ್, ಮೈಸೂರು ಜಿಲ್ಲಾ ಸಮಿತಿ ಸದಸ್ಯರಾದ ತಬ್ರೇಜ್ ಸೇಠ್, MZ ಗ್ರೂಪ್ ಅಧ್ಯಕ್ಷರಾದ ಅಜೀಜ್ ಉಲ್ಲಾ ಅಜ್ಜು ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News