ತುಂಬೆ: ಪಾಪ್ಯುಲರ್ ಫ್ರಂಟ್ ಡೇ ಪ್ರಯುಕ್ತ ರಕ್ತದಾನ ಶಿಬಿರ

Update: 2019-02-03 13:28 GMT

ಫರಂಗಿಪೇಟೆ, ಫೆ. 3: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಫರಂಗಿಪೇಟೆ ವಲಯ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ ಇದರ ಸಹಯೋಗದಲ್ಲಿ ಪಾಪ್ಯುಲರ್ ಫ್ರಂಟ್ ಡೇ ಪ್ರಯುಕ್ತ ತುಂಬೆ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ಈ ಸಂದರ್ಭ ಮಾತನಾಡಿದ ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ನಮ್ಮ ದೇಶದಲ್ಲಿ ರಕ್ತದ ಕೊರತೆಯಿಂದ ಹಲವು ಜೀವಗಳು ಸಾವನ್ನಪ್ಪುತ್ತದೆ ಇಂತಹ ಸಂದರ್ಭದಲ್ಲಿ ಜೀವ ಉಳಿಸುವ ಉದ್ದೇಶ ಮತ್ತು ತುರ್ತು ಸಂದರ್ಭಕ್ಕಾಗಿಯೇ ರಕ್ತದಾನ ಶಿಬಿರ ನಡೆಸುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಪಾಪ್ಯುಲರ್ ಫ್ರಂಟ್ ಡೇ ಪ್ರಯುಕ್ತ ದೇಶದಾದ್ಯಂತ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವೂದು ಶ್ಲಾಘನೀಯವಾಗಿದೆ ಎಂದು ಹೇಳಿದರು.

ಶಿಬಿರದ ಉದ್ಘಾಟನೆಯನ್ನು ತುಂಬೆ ಮಸೀದಿಯ ಖತೀಬ್ ಅಬ್ದುಲ್ ಲತೀಫ್ ಫೈಝಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಪಿ.ಎಫ್.ಐ ಫರಂಗಿಪೇಟೆ ವಲಯಾಧ್ಯಕ್ಷ ನಿಸಾರ್ ವಳವೂರು ವಹಿಸಿದರು.

ಅತಿಥಿಗಳಾಗಿ ಬಂಟ್ವಾಳ ಗ್ರಾಮಾಂತರ ಠಾಣೆ ಉಪ ನಿರೀಕ್ಷಕರಾದ ಪ್ರಸನ್ನ ಕುಮಾರ್, ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ ಆಡಳಿತ ನಿರ್ದೇಶಕರಾದ ವಂ. ರೋಶನ್ ಕ್ರಾಸ್ತಾ, ಪಿ.ಎಫ್.ಐ ಬಂಟ್ವಾಳ ಪ್ರಧಾನ ಕಾರ್ಯದರ್ಶಿ ಸಲೀಮ್ ಕುಂಪನಮಜಲ್, ತುಂಬೆ ಮಸೀದಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಅದ್ದಾದಿ, ರಕ್ತ ನಿಧಿ ಇನ್ಚಾರ್ಜ್ ಡಾ ಅಲಿಶಾ, ತುಂಬೆ ಗ್ರಾಪಂ ಸದಸ್ಯ ಝಹೂರ್ ತುಂಬೆ, ಪುದು ಗ್ರಾಪಂ ಸದಸ್ಯ ನಝೀರ್ ಹತ್ತನೇಮೈಲ್ ಕಲ್ಲು, ಪಿ.ಎಫ್ ಐ ಅರ್ಕುಳ ವಳಯಾಧ್ಯಕ್ಷ ರಶೀದ್ ಅರ್ಕುಳ,  ತುಂಬೆ ವಲಯಾಧ್ಯಕ್ಷ ಸಿರಾಜ್ ತುಂಬೆ, ಎಸ್.ಡಿ.ಪಿ.ಐ ತುಂಬೆ ಗ್ರಾಮ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಉಪಸ್ಥಿತರಿದ್ದರು.

ಕಾದರ್ ಅಮೆಮಾರ್ ಕಾರ್ಯಕ್ರಮ ನಿರೂಪಿಸಿ, ಸುಹಾಝ್ ತುಂಬೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News