×
Ad

ಬಡವರ ಉದ್ಧಾರಕ್ಕೆ ಹೃದಯ ಶ್ರೀಮಂತಿಕೆ ಮುಖ್ಯ: ಪ್ರಕಾಶ್ ಶೆಟ್ಟಿ

Update: 2019-02-03 20:24 IST

ಉಡುಪಿ, ಫೆ.3: ಬಂಟ ಸಮುದಾಯದಲ್ಲಿ ಬಹಳ ಮಂದಿ ಬಡವರು ಹಾಗೂ ಶ್ರೀಮಂತರೂ ಕೂಡ ಇದ್ದಾರೆ. ಶ್ರೀಮಂತರಲ್ಲಿ ಸಮುದಾಯದ ಬಡವ ರನ್ನು ಉದ್ಧಾರ ಮಾಡಲು ಹೃದಯ ಶ್ರೀಮಂತಿಕೆ ಅತಿ ಮುಖ್ಯವಾಗಿ ಇರ ಬೇಕಾಗಿದೆ ಎಂದು ಬೆಂಗಳೂರು ಎಂಆರ್‌ಜಿ ಗ್ರೂಪ್ಸ್‌ನ ಆಡಳಿತ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿ ಹೇಳಿದ್ದಾರೆ.

ಉಡುಪಿ ಬಂಟರ ಸಂಘದ 24ನೆ ವರ್ಷದ ವಾರ್ಷಿಕ ಅಧಿವೇಶನದ ಪ್ರಯುಕ್ತ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ರವಿವಾರ ಆಯೋಜಿಸಲಾದ ಸಾಧಕರಿಗೆ ಅಭಿನಂದನೆ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ಸಹಾಯಧನ ವಿತರಣಾ ಸಮಾರಂಭವನ್ನು ಉ್ಘಾಟಿಸಿ ಅವರು ಮಾತನಾಡು ತಿದ್ದರು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸುಂದರರಾಮ್ ಶೆಟ್ಟಿ ಅವರು ಬಂಟರ ಮನೆಗಳನ್ನು ಬೆಳಗುವಂತೆ ಮಾಡಿದ್ದಾರೆ. ಇವರ ಹುಟ್ಟೂರಾದ ಮುಲ್ಕಿ ಯಲ್ಲಿ ಸುಂದರರಾಮ್ ಶೆಟ್ಟಿ ಭವನವನ್ನು ನಿರ್ಮಿಸುವ ಕಾರ್ಯವನ್ನು ಸುಮಾರು 25ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಇದರ ಕಾಮಗಾರಿ ಮುಂದಿನ ಆರು ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಈ ಭವನವನ್ನು ಸಮಾಜ ಏಳಿಗೆಗಾಗಿ ಬಳಸಿಕೊಳ್ಳಲಾಗುವುದು ಎಂದರು.

ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಜಾಗೃತ ಸಮಾಜವಾಗಿರುವ ಬಂಟರು ಸಮಾಜದ ಎಲ್ಲ ಕಾರ್ಯಕ್ರಮಗಳಲ್ಲೂ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಸಮಾಜದಲ್ಲಿರುವ ರಾಜಕೀಯ, ಸಾಮಾಜಿಕ ವಾಗಿ ಧ್ವನಿ ಇಲ್ಲದ ಸಮುದಾಯದವನ್ನು ಒಗ್ಗೂಡಿಸಿಕೊಂಡು ಹೋಗುವ ಕಾರ್ಯವನ್ನು ಬಂಟ ಸಮುದಾಯ ಮಾಡಬೇಕಾಗಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಮುಂಬೈಯ ಉದ್ಯಮಿ ಆನಂದ ಶೆಟ್ಟಿ, ಶ್ರೀದೇವಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ಎ.ಸದಾನಂದ ಶೆಟ್ಟಿ, ಉಡುಪಿಯ ಉದ್ಯಮಿ ಪುರುಷೋತ್ತಮ ಶೆಟ್ಟಿ ಭಾಗವಹಿಸಿದ್ದರು. ಮುಂಬಯಿ ಬಂಟರ ಸಂಘದ ಮಹಿಳಾ ವಿಭಾಗದ ನಿಕಟಪೂರ್ವ ಅಧ್ಯಕ್ಷೆ ಲತಾ ಜಯರಾಮ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮನೋಹರ್ ಶೆಟ್ಟಿ ಹಾಗೂ ಬಂಟ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು, ಕ್ರೀಡಾಪಟು ಗಳನ್ನು ಸಮಾಜ ಸೇವಕರನ್ನು ಸನ್ಮಾನಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ, ಪಿಯುಸಿ, ಪದವಿ, ತಾಂತ್ರಿಕ ವಿದ್ಯಾ ಭ್ಯಾಸ, ಇಂಜಿನಿಯರಿಂಗ್, ವೈದ್ಯಕೀಯ, ನರ್ಸಿಂಗ್, ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿರುವ ಸುಮಾರು 265 ಪ್ರತಿಭಾವಂತರಿಗೆ ಎಂಟು ಲಕ್ಷ ರೂ. ಸಹಾಯಧನವನ್ನು ವಿತರಿಸಲಾಯಿತು.

ಶ್ರೀಸಿದ್ದಿವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗೇಶ್ ಹೆಗ್ಡೆ, ಸಂಘದ ಗೌರವಾಧ್ಯಕ್ಷ ಕೆ.ಜಯರಾಮ್ ಶೆಟ್ಟಿ, ಉದ್ಯಮಿ ರಾಮಚಂದ್ರ ಶೆಟ್ಟಿ, ಬಂಟರ ಸಂಘದ ಮಾತೃಸಂಘದ ಕಾರ್ಯದರ್ಶಿ ವಸಂತ ಶೆಟ್ಟಿ, ಮುಂಬೈ ಬಂಟರ ಸಂಘದ ಕಾರ್ಯದರ್ಶಿ ಮೋಹನ್‌ದಾಸ್ ಶೆಟ್ಟಿ, ಪ್ರಾದೇಶಿ ಸಮಿತಿ ಸಂಚಾಲಕ ಇಂದ್ರಾಳಿ ದಿವಾಕರ ಶೆಟ್ಟಿ, ಬಂಟರ ಸಂಘದ ಉಡುಪಿ ತಾಲೂಕು ಉಪಸಂಚಾಲಕ ಅಂಡಾರು ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಪ್ರಧಾನ ಕಾರ್ಯದರ್ಶಿ ಮೋಹನ್ ಶೆಟ್ಟಿ ವರದಿ ವಾಚಿಸಿದರು. ಕೋಶಾಧಿಕಾರಿ ತೋನ್ಸೆ ಮನೋಹರ್ ಶೆಟ್ಟಿ ವಂದಿಸಿದರು. ಸತೀಶ್ ಶೆಟ್ಟಿ ಹಾಗೂ ವಿಜೇ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News