ಫೆ.4: ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನಾ ಸಭೆ

Update: 2019-02-03 14:59 GMT

ಮಂಗಳೂರು, ಫೆ.3: ಹುತಾತ್ಮರ ದಿನದಂದು ಮಹಾತ್ಮ ಗಾಂಧೀಜಿ ಪ್ರತಿಕೃತಿಗೆ ಗುಂಡಿಟ್ಟು ಹತ್ಯೆ ಮಾಡುವಂತಹ ಹೇಯ ಕೃತ್ಯ ಎಸಗಿರುವುದು ಮತ್ತು ಗೋಡ್ಸೆ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂಭ್ರಮಿಸಿರುವುದನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಫೆ.4ರಂದು ಬೆಳಗ್ಗೆ 10:30ಕ್ಕೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನಾ ಸಭೆ ನಡೆಯಲಿದೆ.

ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್‌ ಕುಮಾರ್  ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News