ಕಾಲೇಜು ಕಟ್ಟಡ ನಿರ್ಮಾಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಪ್ರಧಾನಿ ಮೋದಿ
Update: 2019-02-03 21:51 IST
ಯಾದಗಿರಿ, ಫೆ.3: ಇಲ್ಲಿನ ಸರಕಾರಿ ಪದವಿ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ಶಹಾಪುರದ ಸರಕಾರಿ ಪದವಿ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಾಯಿತು. ಕಾಲೇಜಿನ ಕಟ್ಟಡ ನಿರ್ಮಾಣ ಸೇರಿದಂತೆ ಯೋಜನೆ ಅಡಿ ಮೊದಲ ಭಾಗವಾಗಿ 25 ಕೋಟಿ ರೂ. ಅನುದಾನ ಲಭ್ಯವಾಗಲಿದ್ದು, 5ರಿಂದ 6 ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಎಸ್.ಮಲ್ಲೇಶಪ್ಪ, ಗುಲ್ಬರ್ಗಾ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ನಿರಂಜನ್ ಮತ್ತು ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ಭಾಗಿಯಾಗಿದ್ದರು.