×
Ad

ಮಾ.10 ರಂದು ಪಲ್ಸ್ ಪೊಲಿಯೋ

Update: 2019-02-03 21:59 IST

ಬೆಂಗಳೂರು, ಫೆ.3: ಲಸಿಕೆ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ತಾತ್ಕಾಲಿಕವಾಗಿ ಮುಂದೂಡಲಾಗಿದ್ದ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮ ಮಾ.10ಕ್ಕೆ ನಿಗದಿಯಾಗಿದೆ. 

ಈ ಹಿಂದೆ ಫೆಬ್ರವರಿ 3ರಂದು ದೇಶದಲ್ಲಿ ಸುಮಾರು 17 ಕೋಟಿ ಮಕ್ಕಳಿಗೆ ಏಕಕಾಲಕ್ಕೆ ಪೊಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ನಡೆಸಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿತ್ತು. ಆದರೆ, ಪೂರೈಕೆಯಲ್ಲಿ ಒಂದಿಷ್ಟು ವ್ಯತ್ಯಯ ಕಂಡು ಬಂದ ಹಿನ್ನೆಲೆಯಲ್ಲಿ ದೇಶಾದ್ಯಂತ ತಾತ್ಕಾಲಿಕವಾಗಿ ಈ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಪ್ರಸ್ತುತ ನಿಗದಿ ಪಡಿಸಿದಷ್ಟು ರಾಜ್ಯಗಳಿಗೆ ಸೂಕ್ತ ಪ್ರಮಾಣದಲ್ಲಿ ಲಸಿಕೆ ಪೂರೈಕೆಯಾಗಿರುವ ಹಿನ್ನೆಲೆಯಲ್ಲಿ ಮಾ.10ಕ್ಕೆ ದಿನಾಂಕ ನಿಗದಿಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News