×
Ad

ಮಮತಾ ಬ್ಯಾನರ್ಜಿಯವರ ಪ್ರತಿಭಟನೆಗೆ ಡಿಎಂಕೆ ವರಿಷ್ಠ ಎಂ.ಕೆ. ಸ್ಟಾಲಿನ್ ಬೆಂಬಲ

Update: 2019-02-04 19:20 IST

ಚೆನ್ನೈ,ಫೆ.4: ಸಿಬಿಐಯನ್ನು ಎದುರು ಹಾಕಿಕೊಂಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬೆಂಬಲವನ್ನು ವ್ಯಕ್ತಪಡಿಸಿರುವ ಡಿಎಂಕೆ ಅಧ್ಯಕ್ಷ ಎಂ.ಕೆ ಸ್ಟಾಲಿನ್ ಅವರು,ಪ್ರಜಾಪ್ರಭುತ್ವವನ್ನು ಉಳಿಸಲು ನಡೆಸುತ್ತಿರುವ ಹೋರಾಟದಲ್ಲಿ ತಾನು ಬ್ಯಾನರ್ಜಿ ಜೊತೆಯಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

ಫ್ಯಾಸಿಸ್ಟ್ ಬಿಜೆಪಿ ನೇತೃತ್ವದ ಸರಕಾರದಡಿ ಪ್ರತಿಯೊಂದೂ ಕೇಂದ್ರೀಯ ಸಂಸ್ಥೆಯ ಸ್ವಾತಂತತ್ರ್ಯಕ್ಕೆ ಧಕ್ಕೆಯುಂಟಾಗಿದೆ ಎಂದೂ ಸ್ಟಾಲಿನ್ ರವಿವಾರ ರಾತ್ರಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

ತಮಿಳುನಾಡು ಪ್ರತಿಪಕ್ಷ ನಾಯಕರಾಗಿರುವ ಸ್ಟಾಲಿನ್,ಬ್ಯಾನರ್ಜಿಯವರು ಕಳೆದ ತಿಂಗಳು ಕೋಲ್ಕತಾದಲ್ಲಿ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ಆಯೋಜಿಸಿದ್ದ ಬೃಹತ್ ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಸಿಬಿಐ ಜೊತೆ ಸಂಘರ್ಷದ ಹಿನ್ನೆಲೆಯಲ್ಲಿ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಂದ ತಾನು ಅನುಭವಿಸಿರುವ ‘ಅವಮಾನಗಳನ್ನು’ ಪ್ರತಿಭಟಿಸಿ ರವಿವಾರ ರಾತ್ರಿಯಿಂದ ಕೋಲ್ಕತಾದಲ್ಲಿ ಧರಣಿ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ,ಆಂಧ್ರಪ್ರದೇಶ ಮತ್ತು ದಿಲ್ಲಿ ಮುಖ್ಯಮಂತ್ರಿಗಳಾದ ಎನ್.ಚಂದ್ರಬಾಬು ನಾಯ್ಡು ಮತ್ತು ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವಾರು ಪ್ರತಿಪಕ್ಷ ನಾಯಕರು ಬ್ಯಾನರ್ಜಿಯವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News