ಫೆ. 8ಕ್ಕೆ ಹಿರಿಯ ನಾಗರಿಕರಿಗೆ ಕಾರ್ಯಾಗಾರ
Update: 2019-02-04 20:50 IST
ಉಡುಪಿ, ಫೆ.4: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪಾಲಕರ, ಪೋಷಕರ ಸಂರಕ್ಷಣೆ ಮತ್ತು ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯಡಿ ಅನುಷ್ಠಾನ ಗೊಳ್ಳುತ್ತಿರುವ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲು ಜಿಲ್ಲಾ ಅನುಷ್ಠಾನ ಸಮಿತಿ ಸಭೆ ಫೆ.8ರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮಣಿಪಾಲದಲ್ಲಿರುವ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣ ದಲ್ಲಿ ನಡೆಯಲಿದೆ.
ಇದರಲ್ಲಿ ವಿವಿಧ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ಅನುಷ್ಠಾನ ಗೊಳ್ಳುತ್ತಿರುವ ಯೋಜನೆಗಳ ಮತ್ತು ಹಿರಿಯ ನಾಗರಿಕರಿಗೆ ಸೇವಾ ಸಿಂಧು ಸಂಸ್ಥೆಯಡಿ ಆನ್‌ಲೈನ್ ಮೂಲಕ ಗುರುತು ಚೀಟಿ ವಿತರಿಸುವ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ವಿವಿಧ ಇಲಾಖಾಧಿಕಾರಿಗಳು, ಹಿರಿಯ ನಾಗರಿಕರ ಸಂಸ್ಥೆಗಳ ಮುಖ್ಯಸ್ಥರು, ವೃದ್ಧಾಶ್ರಮದ ಮುಖ್ಯಸ್ಥರುಗಳು ಭಾಗವಹಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಬಲೀಕರಣ ಇಲಾಖೆ ಪ್ರಕಟಣೆ ತಿಳಿಸಿದೆ.