×
Ad

ಎಸ್.ಮೂರ್ತಿ ಅಮಾನತು ಪ್ರಕರಣ: ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾ.ಆರ್.ದೇವದಾಸ್

Update: 2019-02-04 22:38 IST
ಎಸ್.ಮೂರ್ತಿ

ಬೆಂಗಳೂರು, ಫೆ.4: ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಅಮಾನತುಗೊಳಿಸಿದ ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ಎಸ್.ಮೂರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಆರ್.ದೇವದಾಸ್ ಅವರು ಹಿಂದೆ ಸರಿದಿದ್ದಾರೆ.

ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿದ ಆದೇಶದ ಅನುಸಾರ ವಿಧಾನಸಭೆ ಕಾರ್ಯದರ್ಶಿಯಾಗಿದ್ದ ಎನ್.ಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಿ 2018ರ ಡಿ.27ರಂದು ಕರ್ನಾಟಕ ವಿಧಾನಸಭೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ, ಎನ್.ಮೂರ್ತಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯು ಸೋಮವಾರ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆದರೆ, ನ್ಯಾಯಮೂರ್ತಿಗಳು ಈ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿದರು.

2016 ಹಾಗೂ 2017ನೇ ಸಾಲಿನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕಾಮಗಾರಿಗಳಲ್ಲಿ ಹಾಗೂ ಇತರೆ ಖರ್ಚು ವೆಚ್ಚಗಳಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಧಾನಸಭೆಯ ಸಭಾಪತಿ ಅವರ ಟಿಪ್ಪಣೆ ಹಾಗೂ ವಿಧಾನಸಭೆ ವಿಶೇಷ ಮಂಡಳಿಯ ಆದೇಶದ ಅನುಸಾರ ಎನ್.ಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News