ಮೋದಿ ಸರ್ವಾಧಿಕಾರಿ ಆಡಳಿತ ನಡೆಸುತ್ತಿದ್ದಾರೆ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

Update: 2019-02-04 18:31 GMT

ಮೈಸೂರು,ಫೆ.4: ಪ್ರಧಾನಿ ನರೇಂದ್ರ ಮೋದಿ ಒಬ್ಬ ಸರ್ವಾಧಿಕಾರಿಯಂತೆ ದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಸಿಬಿಐ ಸಂಸ್ಥೆ ಸೇರಿದಂತೆ ಎಲ್ಲಾ ಸಂಸ್ಥೆಗಳನ್ನೂ ತಮ್ಮ ಅಧೀನದಲ್ಲಿ ಇಟ್ಟುಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಸುತ್ತೂರು ಜಾತ್ರಾಮಹೋತ್ಸವದಲ್ಲಿ ಭಾಗವಹಿಸಲು ಸೋಮವಾರ ಮೈಸೂರಿಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗ ಮಾತನಾಡಿದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆಡಳಿತಾತ್ಮಕ ದೃಷ್ಟಿಯಿಂದ ಸರಿಯಾಗಿಯೇ ನಡೆದುಕೊಂಡಿದ್ದಾರೆ. ಸಿಬಿಐ ದಾಳಿ ಮಾಡುವಾಗ ಕಾನೂನನ್ನು ಅನುಸರಿಸಬೇಕು, ಆದರೆ, ಏಕಾಏಕಿ ರಾಜ್ಯಕ್ಕೆ ಬೆದರಿಸುವ ತಂತ್ರ ರೂಪಿಸಿದ್ದಾರೆ ಎಂದು ಹೇಳಿದರು.

ಮಮತಾ ಬ್ಯಾನರ್ಜಿ ಅವರು ಈ ವಿಷಯದಲ್ಲಿ ಸರಿಯಾಗಿಯೇ ನಡೆದುಕೊಂಡಿದ್ದಾರೆ. ನರೇಂದ್ರ ಮೋದಿ ಒಬ್ಬ ಸರ್ವಾಧಿಕಾರಿಯಂತೆ ದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಸಿಬಿಐ ಸಂಸ್ಥೆ ಸೇರಿದಂತೆ ಎಲ್ಲಾ ಸಂಸ್ಥೆಗಳನ್ನು ತಮ್ಮ ಅಧೀನದಲ್ಲಿ ಇಟ್ಟುಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಿಬಿಐ ಸಂಸ್ಥೆಯ ಮೇಲೆ ಜನರಿಗೆ ನಂಬಿಕೆ ಇಲ್ಲ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಬಿಜೆಪಿ ಮುಖಂಡರು ಪದೇ ಪದೇ ಆಪರೇಷನ್ ಮಾಡುತ್ತಿದ್ದಾರೆ. ಅವರದು ಅನೈತಿಕ ರಾಜಕಾರಣ. ಸಮ್ಮಿಶ್ರ ಸರ್ಕಾರ ಬಂದಾಗಿನಿಂದಲೂ ಸರ್ಕಾರ ಬೀಳುತ್ತೆ ಅಂತ ಜನತೆಯನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ಕೆಲಸ ಮಾಡಲಿ ಎಂದು ಟೀಕಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News