ಪುತ್ತೂರು: ಎಪಿಎಂಸಿ ಅಧ್ಯಕ್ಷರಾಗಿ ದಿನೇಶ್ ಮೆದು, ಉಪಾಧ್ಯಕ್ಷರಾಗಿ ಮಂಜುನಾಥ್ ಎನ್.ಎಸ್ ಅವಿರೋಧ ಆಯ್ಕೆ
ಪುತ್ತೂರು, ಫೆ. 5: ಪುತ್ತೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಯ 2ನೇ ಅವಧಿಗೆ ಅಧ್ಯಕ್ಷರಾಗಿ ದಿನೇಶ್ ಮೆದು ಹಾಗೂ ಉಪಾಧ್ಯಕ್ಷರಾಗಿ ಮಂಜುನಾಥ ಎನ್.ಎಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿಯ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಹಾಗೂ ಉಪಾಧ್ಯಕ್ಷ ಬಾಲಕೃಷ್ಣ ಬಾಣಜಾಲು ಅವರ 20 ತಿಂಗಳ ಅಧಿಕಾರ ಅವಧಿ ಪೂರ್ಣಗೊಂಡ ಹಿನ್ನಲೆಯಲ್ಲಿ ಮಂಗಳವಾರ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಮೆದು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಂಜುಮಾಥ ಎನ್.ಎಸ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅವರಿಬ್ಬರೂ ಅವಿರೋಧವಾಗಿ ಆಯ್ಕೆಯಾದರು.
ಪುತ್ತೂರು ತಾಲೂಕು ತಹಶೀಲ್ದಾರ್ ಡಾ. ಪ್ರದೀಪ್ ಕುಮಾರ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ತಾಲೂಕು ಕಚೇರಿಯ ಚುನಾವಣಾ ಶಾಖೆಯ ನಾಗೇಶ್ ಮತ್ತು ಎಪಿಎಂಸಿ ಪ್ರಭಾರ ಕಾರ್ಯದರ್ಶಿ ರಾಮಚಂದ್ರ ಹಾಗೂ ಸಿಬ್ಬಂದಿಗಳು ಸಹಕರಿಸಿದರು.
ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಮೆದು ಅವರನ್ನು ಹಾಲಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಅವರು ಸೂಚಿಸಿ, ಸದಸ್ಯ ತೀರ್ಥಾನಂದ ದುಗ್ಗಳ ಅನುಮೋದಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಮಂಜುನಾಥ ಎನ್.ಎಸ್ ಅವರನ್ನು ಹಾಲಿ ಉಪಾಧ್ಯಕ್ಷ ಬಾಲಕೃಷ್ಣ ಬಾಣಜಾಲು ಸೂಚಿಸಿ, ಸದಸ್ಯೆ ತ್ರಿವೇಣಿ ಪೆರ್ವೋಡಿ ಅನುಮೋದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಮಂಡಲ ಅಧ್ಯಕ್ಷ ಜೀವಂಧರ್ ಜೈನ್, ನಗರಸಭಾ ಸದಸ್ಯ ಸುಂದರ ಪೂಜಾರಿ ಬಡಾವು, ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಡಾ. ಎಂ.ಕೆ. ಪ್ರಸಾದ್, ಸುಳ್ಯ ಮಂಡಲ ಬಿಜೆಪಿ ಕಾರ್ಯದರ್ಶಿ ರಾಕೇಶ್ ರೈ ಕಡೆಂಜಿ, ತಾ.ಪಂ. ಉಪಾಧ್ಯಕ್ಷೆ ರಾಜೇಶ್ವರಿ, ಸದಸ್ಯರಾದ ಮೀನಾಕ್ಷಿ ಮಂಜುನಾಥ್, ಯುವಜನ ಒಕ್ಕೂಟದ ಜಿಲ್ಲಾಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಮತ್ತಿತರರು ಉಪಸ್ಥಿತರಿದ್ದು, ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.