ಹುಬ್ಬಳ್ಳಿ: ಹಿರಿಯ ನಾಗರಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

Update: 2019-02-05 11:46 GMT

ಹುಬ್ಬಳ್ಳಿ, ಫೆ. 5: ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕಕರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು.

ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಕಾನೂನು 2007ರ ಅನ್ವಯವಾಗಿ ಸರ್ಕಾರ ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ನೀತಿಯನ್ನು (ಪಾಲಿಸಿಜ್ ಆಫ್ ಸಿನಿಯರ್ ಸಿಟಿಜನ್) ಹೊರಡಿಸಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಆದರೇ ಬಹುತೇಕ ಹಿರಿಯ ನಾಗರಿಕರ ಸಮಸ್ಯ ಬಗೆಹರಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಿರಿಯ ನಾಗರಿಕರ ಅತಿ ಸಣ್ಣ ಪುಟ್ಟ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ರಾಜ್ಯಮಟ್ಟದ ಪ್ರತಿಭಟನೆ ನಡೆಸಲಾಯಿತು.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಹುಬ್ಬಳ್ಳಿಯಲ್ಲಿ ನಿರ್ಮಾಣಗೊಳ್ಳಬೇಕಿದ್ದ ಹಿರಿಯ ನಾಗರಿಕರ ಭವನ ನಿರ್ಮಾಣ ನೆನೆಗುದಿಗೆ ಬಿದ್ದಿದೆ ಎಂದರು. ಭಾರತ ಸಂವಿಧಾನ ಕಲಂ 41ರ ಪ್ರಕಾರ ದೇಶದ ಪ್ರತಿಯೊಬ್ಬ ಹಿರಿಯ ನಾಗರಿಕರಿಗೆ ಮೂಲಭೂತ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಆದರೆ ಸರ್ಕಾರ ಇದಾವುದರ ಬಗ್ಗೆಯೂ ತಲೆ ಕೆಡೆಸಿಕೊಳ್ಳುತ್ತಿಲ್ಲ ಅಲ್ಲದೇ ಕಿಮ್ಸ್ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗದಲ್ಲಿ ಆರಂಭಿಸಿದ ಹಿರಿಯ ನಾಗರಿಕರ ಸೌಲಭ್ಯ ಮುಚ್ಚಲ್ಪಟ್ಟಿದೆ ಈ ಕುರಿತು ಶೀಘ್ರವಾಗಿ ಕ್ರಮ ಕೈಗೊಳ್ಳದಿದ್ದರೇ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಹಿರಿಯ ನಾಗರಿಕರಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸಬೇಕು, ನಿವೃತ್ತರಿಗೆ ಜಿಪಿಎಫ್ ಸೇವೆ ಶೀಘ್ರವಾಗಿ ಹೆಚ್ಚಳ ಮಾಡಬೇಕು, ಸರ್ಕಾರಿ ಬಸ್ ಸಾರಿಗೆಯಲ್ಲಿ ನಾಲ್ಕು ಸ್ಥಾನ ಮೀಸಿಲಿಡಬೇಕು, ಬ್ಯಾಂಕ್ ಸೇವೆಯಲ್ಲಿ ಹಿರಿಯ ನಾಗರಿಕರಿಗೆ ಸುವ್ಯವಸ್ಥೆ ಕಲ್ಪಿಸಬೇಕು ಅಲ್ಲದೇ ಹಿರಿಯ ನಾಗರಿಕರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸೂಕ್ತ ಕ್ರಮ ಜಾರಿ ಮಾಡಬೇಕು ಎಂದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಬಿ.ಎ.ಪಾಟೀಲ ಹಾಗು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News