ವರದಕ್ಷಿಣೆ ರುಕುಳದಿಂದ ಪತ್ನಿ ಆತ್ಮಹತ್ಯೆ : ಪತಿಗೆ 10 ವರ್ಷ ಸಜೆ - ದಂಡ
Update: 2019-02-05 18:48 IST
ಶಿವಮೊಗ್ಗ, ಫೆ. 5: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ಪತ್ನಿಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಪತಿಗೆ 10 ವರ್ಷ ಕಾರಾಗೃಹ ವಾಸ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿವಮೊಗ್ಗ ತಾಲೂಕು ಚೆನ್ನಹಳ್ಳಿ ಗ್ರಾಮದ ವಾಸಿಯಾದ ಆರ್.ಸಿ.ಮಂಜುನಾಥ್ (26) ಶಿಕ್ಷೆಗೊಳಗಾದ ಪತಿ ಎಂದು ಗುರುತಿಸಲಾಗಿದೆ. ನ್ಯಾಯಾಧೀಶೆ ಪ್ರಭಾವತಿ ಎಂ. ಹಿರೇಮಠರವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿ.ಜಿ.ಯಳಗೇರಿಯವರು ವಾದ ಮಂಡಿಸಿದ್ದರು.