ಸಿದ್ದಾಪುರ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Update: 2019-02-05 13:43 GMT

ಮಡಿಕೇರಿ, ಫೆ.5 :ಕಾಲೇಜ್‍ಗೆ ತೆರಳಿದ ವಿದ್ಯಾರ್ಥಿನಿಯೊಬ್ಬಳು ಮನೆಗೆ ಮರಳದೆ ನಾಪತ್ತೆಯಾಗಿರುವ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ಸಿದ್ದಾಪುರದ ಮೈಸೂರು ರಸ್ತೆಯಲ್ಲಿರುವ ಎಮ್ಮೆಗುಂಡಿ ಡಿವಿಷನ್ ಸಿದ್ದಾಪುರ ಕಾಫಿ ತೋಟದ ವಸತಿ ಗೃಹದಲ್ಲಿ ವಾಸವಿರುವ ಕಾರ್ಮಿಕ ದಂಪತಿಗಳ ಪುತ್ರಿಯೊಬ್ಬಳು ನೆಲ್ಯಹುದಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಫೆ.4 ರಂದು ಸಂಜೆ ಕಾಲೇಜು ಬಿಟ್ಟು ಮನೆಗೆಂದು ತೆರಳಿದ್ದನೆನ್ನಲಾಗಿದೆ. ಆದರೆ ಸಂಜೆಯಾದರೂ ಮನೆಗೆ ಹಿಂತಿರುಗದ ಹಿನ್ನೆಲೆಯಲ್ಲಿ, ವಿದ್ಯಾರ್ಥಿನಿಯ ಪೋಷಕರು ಹಾಗೂ ಸ್ಥಳೀಯರು ಹುಡುಕಾಡಿದ್ದು, ಸಂಬಂಧಿಕರ ಮನೆಗಳಲ್ಲಿ ವಿಚಾರಿಸಿದರೂ ಆಕೆಯ ಸುಳಿವು ದೊರೆತಿಲ್ಲ.   

ಈ ಹಿನ್ನೆಲೆಯಲ್ಲಿ ಪೋಷಕರು ಮಗಳು ಕಾಣೆಯಾಗಿರುವ ಕುರಿತು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News